ಕಾನೂನು ಸುವ್ಯವಸ್ಥೆ ಸರಿಯಾಗಿದ್ದರೆ ಮಾತ್ರ ಆ ರಾಜ್ಯ ಅಭಿವೃದ್ಧಿಯಾಗುತ್ತದೆ ; ಮುಖ್ಯಮಂತ್ರಿ‌ ಸಿದ್ದರಾಮಯ್ಯ

ಬೆಂಗಳೂರು: ಕಾನೂನು ಸುವ್ಯವಸ್ಥೆ ಸರಿ ಇದ್ದರೆ ರಾಜ್ಯ ಅಭಿವೃದ್ಧಿಯಾಗುತ್ತದೆ. ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಎಸ್ಪಿ ಹಾಗೂ ಡಿಸಿಪಿಗಳನ್ನು ಹೊಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯ ಸಭಾಂಗಣದಲ್ಲಿ ಸೆ-15ರಂದು ನಡೆದ ಮೊದಲ ಕರ್ನಾಟಕ ರಾಜ್ಯ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಈ ಸೂಚನೆ ನೀಡಿದರು.

ವ್ಯವಸ್ಥೆಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಎಲ್ಲಾ ರಾಜ್ಯಗಳ, ಎಲ್ಲಾ ದೇಶಗಳ ಜನ ನೆಲೆಸಿದ್ದಾರೆ. ಅವರೆಲ್ಲರೂ ನೆಮ್ಮದಿಯಿಂದ, ಖುಷಿಯಿಂದ ಇರಬೇಕು ಎಂದು ಸೂಚಿಸಿದರು. ದೂರು ಬಂದರೆ ಮಾತ್ರ FIR ದಾಖಲಿಸಬೇಕು ಎನ್ನುವ ಮನಸ್ಥಿತಿ ಬಿಟ್ಟುಬಿಡಿ. ಸ್ವಯಂ ಪ್ರೇರಿತ FIR ದಾಖಲಿಸಿಕೊಂಡು ತನಿಖೆ ನಡೆಸಿದರೆ ಪೊಲೀಸ್ ವ್ಯವಸ್ಥೆಗೆ ಘನತೆ ಬರುತ್ತದೆ. ಅಪರಾಧ ಜಗತ್ತಿಗೆ ಭಯವೂ ಮೂಡುತ್ತದೆ ಎಂದರು.

ಸಮಾಜಘಾತುಕ ಶಕ್ತಿಗಳ ಜತೆ ಸ್ನೇಹ ಇಟ್ಟುಕೊಂಡಿರುವ ಅಧಿಕಾರಿಗಳನ್ನೂ ನಾನು ಗಮನಿಸಿದ್ದೇನೆ. ಹೀಗಾದಾಗ ಜನ ಸಾಮಾನ್ಯರಿಗೆ ಪೊಲೀಸ್ ವ್ಯವಸ್ಥೆ ಮೇಲೆ ನಂಬಿಕೆ ಬರಲು ಹೇಗೆ ಸಾಧ್ಯ? ಬೇಲಿಯೇ ಎದ್ದು ಹೊಲ ಮೇಯ್ದರೆ ಸಮಾಜದ ರಕ್ಷಣೆ ಹೇಗೆ ಸಾಧ್ಯ ಎಂದು ಜನ ಸಾಮಾನ್ಯರು ಪ್ರಶ್ನಿಸುತ್ತಾರೆ. ಚಾಳಿಬಿದ್ದ ರೌಡಿಗಳನ್ನು ಗಡಿಪಾರು ಮಾಡುವುದು ಹೆಚ್ಚು ಕ್ರಿಯಾಶೀಲವಾಗಿ ನಡೆಯಬೇಕು. ಅವರಿಗೆ ಸಲೀಸಾಗಿ ಜಾಮೀನು ಸಿಗುವಂಥಾಗಬಾರದು.

ದೂರುದಾರರಿಗೆ ಧೈರ್ಯ ನೀಡುವ ಕೆಲಸ ಪೊಲೀಸ್ ಠಾಣೆಗಳಲ್ಲಿ ಆಗಬೇಕು. ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಸಿಗುವಂತಿರಬೇಕು.

ಗೃಹ ಸಚಿವ ಜಿ.ಪರಮೇಶ್ವರ್, ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು ನಸೀರ್ ಅಹಮದ್ ಅವರು ಉಪಸ್ಥಿತರಿದ್ದರು.

ವ್ಯವಸ್ಥೆ

ವಿಡಿಯೋ ನೋಡಿ:ಬದುಕುವ ಸ್ವಾತಂತ್ರ್ಯಕ್ಕಾಗಿ ಹೋರಾಡಬೇಕಿದೆ – ಪ್ರೊ.ಬರಗೂರು ರಾಮಚಂದ್ರಪ್ಪ Janashakthi Media

Donate Janashakthi Media

Leave a Reply

Your email address will not be published. Required fields are marked *