ನೋಟಿಸ್‌ ಹಿಂಪಡೆದರೂ ಬಿಜೆಪಿಯಿಂದ ರಾಜ್ಯಾದ್ಯಂತ ಪ್ರತಿಭಟನೆ, ದುರುದ್ದೇಶದ ಹೋರಾಟವೆಂದ ಕಾಂಗ್ರೆಸ್‌

ಬೆಂಗಳೂರು: ರೈತರಿಗೆ ನೋಟಿಸ್ ನೀಡಿ, ಪಹಣಿಯಲ್ಲಿ ವಕ್ಫ್‌ ಎಂದು ನಮೂದಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ವಾಕ್ಸಮರ ಬಿರುಸುಗೊಂಡಿದೆ. ಸೋಮವಾರ ರಾಜ್ಯಾದ್ಯಂತ ಬಿಜೆಪಿ ಹೋರಾಟವನ್ನು ಹಮ್ಮಿಕೊಂಡಿದ್ದು, 1974 ರಲ್ಲಿ ವಕ್ಫ್‌ ಆಸ್ತಿ ಕುರಿತಂತೆ ಆಗಿರುವ ಗೆಜೆಟ್ ನೋಟಿಫಿಕೇಷನ್‌ ಹಿಂಪಡೆಯಬೇಕು ಎಂಬುದು ಬಿಜೆಪಿ ಬೇಡಿಕೆಯಾಗಿದೆ.

ಸೋಮವಾರ ಬೆಳಗ್ಗೆಯಿಂದ ಬೆಂಗಳೂರು ನಗರದ ವಿವಿಧ ಕಡೆಗಳಲ್ಲಿ ಸೇರಿದಂತೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಬಿಜೆಪಿ ರಾಜ್ಯಾದ್ಯಕ್ಷ ಬಿವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್ ಆಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ಹಲವು ನಾಯಕರೂ ಇದರಲ್ಲಿ ಭಾಗಿಯಾಗಲಿದ್ದಾರೆ.

ಇನ್ನು ಬಿಜೆಪಿ ಹೋರಾಟ ದುರುದ್ಧೇಶಪೂರ್ವಕ ಎಂದು ರಾಜ್ಯ ಸರ್ಕಾರ ವಾದಿಸುತ್ತಿದೆ. ವಕ್ಫ್‌ ಸಂಬಂಧಿಸಿದಂತೆ ರೈತರಿಗೆ ನೀಡಿರುವ ನೋಟಿಸ್ ವಾಪಸ್ ಪಡೆಯಲಾಗಿದೆ. ಹೀಗಿದ್ದರೂ ಪ್ರತಿಭಟನೆ ನಡೆಸುವ ಮೂಲಕ ಈ ವಿಚಾರವನ್ನು ರಾಜಕೀಯಗೊಳಿಸಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ.

ಅಲ್ಲದೆ, ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ವಕ್ಫ್ ತಿದ್ದುಪಡಿ ಕಾಯ್ದೆಯ ಕಾರಣದಿಂದಾಗಿ ಹೀಗೇಲ್ಲಾ ಮಾಡಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಬಿಜೆಪಿಯ ಹೋರಾಟದಲ್ಲಿ ರೈತರ ಹಿತಾಸಕ್ತಿ ಇಲ್ಲ ಹೊರತಾಗಿ ರಾಜಕೀಯ ಉದ್ದೇಶದಿಂದ ಕೂಡಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

 

Donate Janashakthi Media

Leave a Reply

Your email address will not be published. Required fields are marked *