ಬೆಂಗಳೂರು | ವಾರ್ಡನ್ ಒಬ್ಬರು ವಿದ್ಯಾರ್ಥಿಗಳಿಗೆ ಕನ್ನಡ ನಿಮ್ಮ ಮನೆಯಲ್ಲಿ ಇಟ್ಕೊ ಎಂದು ಎಚ್ಚರಿಕೆ

ಬೆಂಗಳೂರು: ಬೆಂಗಳೂರಿನ ಕಾಲೇಜು ಒಂದರ ಹಾಸ್ಟೆಲ್‌ನಲ್ಲಿ ವಾರ್ಡನ್ ಒಬ್ಬರು ವಿದ್ಯಾರ್ಥಿಗಳಿಗೆ ಕನ್ನಡ ಮಾತನಾಡುವುದನ್ನು ನಿಮ್ಮ ಮನೆಯಲ್ಲಿ ಇಟ್ಕೊ, ಇಲ್ಲಿ ಹಿಂದಿ ಮಾತನಾಡು’ ನೀಡಿರುವ ಎಚ್ಚರಿಕೆಯ ವಿಡಿಯೊ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಹಿಂದಿ, ತಮಿಳು, ತೆಲುಗು, ಮಲಯಾಳಂ ಸೇರಿ ನಾನಾ ಭಾಷಿಕರಿಗೆ ಬದುಕು ಕಟ್ಟಿಕೊಳ್ಳಲು ಅವಕಾಶ ನೀಡುರುವ ಬೆಂಗಳೂರಿನಲ್ಲಿ ಆಗಾಗ ಕನ್ನಡದ ಮೇಲೆ ದಬ್ಬಾಳಿಕೆ ನಡೆಯುತ್ತಿರುವುದನ್ನು ನೋಡಿದ್ದೇವೆ. ಸದ್ಯ ‘ಕನ್ನಡ ನಿಮ್ಮ ಮನೆಯಲ್ಲಿ ಇಟ್ಕೊ, ಇಲ್ಲಿ ಹಿಂದಿ ಮಾತನಾಡು’ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : ಗದಗ | ಮರ್ಯಾದೆಗೇಡು ಹತ್ಯೆ ನಿರ್ಬಂಧಿಸಲು ಸುಪ್ರೀಂ ಕೋರ್ಟ್ ವಿಶೇಷ ಕಾನೂನು ಜಾರಿಗೆ ತರಬೇಕು

ಬನ್ನೇರುಘಟ್ಟದಲ್ಲಿರುವ ಎಎಂಸಿ ಕಾಲೇಜಿನ ಹಾಸ್ಟೆಲ್‌ನದ್ದು ಎನ್ನಲಾಗಿದ ಹರಿದಾಡುತ್ತಿರುವ ವಿಡಿಯೊ ಅಲ್ಲಿರುವ ವಿದ್ಯಾರ್ಥಿಗಳು ಕನ್ನಡದಲ್ಲಿ ಮಾತನಾಡಲು ಮುಂದಾದಾಗ ವಾರ್ಡನ್‌ ಹಿಂದಿಯಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ವಾರ್ಡನ್ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದ ವಿದ್ಯಾರ್ಥಿ, ನಾನು ಯಾಕೆ ಕನ್ನಡದಲ್ಲಿ ಮಾತನಾಡಬಾರದು? ಎಂದು ಪ್ರಶ್ನಿಸಿದ್ದಾರೆ. ಅದಕ್ಕೆ ವಾರ್ಡನ್ ಇಲ್ಲಿ ಯಾವ ಭಾಷೆ ಮಾತನಾಡಬೇಕು ಎಂಬುದನ್ನು ನಾನು ನಿರ್ಧಾರ ಮಾಡುತ್ತೇನೆ. ಇದು ನಿಮ್ಮ ಮನೆಯಲ್ಲ, ಕಾಲೇಜು ಎಂದು ಕನ್ನಡದ ವಿದ್ಯಾರ್ಥಿಗಳಿಗೆ ಕನ್ನಡ ಮಾತನಾಡದಂತೆ ಸೂಚನೆ ನೀಡಿದ್ದಾರೆ.

ಇವನಿಗೆ ಈ ಆದೇಶ ಮಾಡೋಕೆ ಈ ಅಧಿಕಾರ ಕೊಟ್ಟೋರು ಯಾರು? ಈ ವಿಡಿಯೊವನ್ನು ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಹಂಚಿಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ದುರಹಂಕಾರದ ಪರಮಾವಧಿ. ಕನ್ನಡದ ಮೇಲೆ ಅನ್ಯಭಾಷಿಕರ ದಬ್ಬಾಳಿಕೆ. ಕಾಲೇಜಿನಲ್ಲಿ ಕನ್ನಡ ಮಾತನಾಡಬಾರದಂತೆ. ಕಾಲೇಜಿನಲ್ಲಿ ಕನ್ನಡ ವಿದ್ಯಾರ್ಥಿಗಳ ಮೇಲೆ ಈ ದೌರ್ಜನ್ಯ ನಡೆಯುವದನ್ನು ಸಹಿಸೋಲ್ಲ’ ಎಂದಿದ್ದಾರೆ.

‘ಬನ್ನೇರುಘಟ್ಟ ರಸ್ತೆಯಲ್ಲಿರುವ ಎಎಂಸಿ (AMC) ಕಾಲೇಜಿನಲ್ಲಿ ಕನ್ನಡದ ವಿದ್ಯಾರ್ಥಿಗೆ ಕನ್ನಡ ಮಾತನಾಡದಂತೆ ಬೆದರಿಕೆ ಹಾಕಲಾಗಿದೆ. ಕಾಲೇಜುಗಳಲ್ಲಿ ಉದ್ಯೋಗ ಕನ್ನಡಿಗರಿಗೆ ಆದ್ಯತೆ ಸಿಗುತ್ತಿಲ್ಲ. ಇವನು ಅವನ ಊರಿಗೆ ಹೋರಡಲಿ’ ಎಂದು ಕಿಡಿಕಾರಿದ್ದಾರೆ.

ಇದನ್ನೂ ನೋಡಿ : ಮರ್ಯಾದೆಗೇಡು ಹತ್ಯೆ ನಿಷೇಧ ಕಾಯ್ದೆಗಾಗಿ ಪತ್ರ ಚಳವಳಿ Janashakthi Media

Donate Janashakthi Media

Leave a Reply

Your email address will not be published. Required fields are marked *