ಕನ್ನಡ ಶಾಲೆಗಳನ್ನು ಮುಚ್ಚಿದರೆ ಚಳಿಗಾಲ ಅಧಿವೇಶನ ಮುತ್ತಿಗೆ ಎಚ್ಚರಿಕೆ: ಮಹಾಲಿಂಗ ದೊಡ್ಡಮನಿ

ಎಸ್ಎಫ್ಐ ನೇತೃತ್ವದಲ್ಲಿ ಜಾಲಹಳ್ಳಿ ಅಂಬೇಡ್ಕರ್ ಸರ್ಕಲ್ ಬಳಿ ಬೃಹತ್ ಪ್ರತಿಭಟನೆ
ಜಾಲಹಳ್ಳಿ: ರಾಜ್ಯದ 700 ಪಂಚಾಯಿತಿಗಳ ಮಟ್ಟದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಿಸಿ ಸುತ್ತಮುತ್ತಲಿನ ಸರ್ಕಾರಿ ಶಾಲೆ, ಪದವಿ ಪೂರ್ವ ಕಾಲೇಜುಗಳನ್ನು ವಿಲೀನಗೊಳಿಸಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ, ಸರ್ಕಾರಿ ಶಾಲೆಗಳ ಉಳಿವಿಗಾಗಿ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ಜಾಲಹಳ್ಳಿ ವಲಯ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ಗ್ರಾಮದ ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು. ಚಳಿಗಾಲ

ಗ್ರಾಮದ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಜಾಥಾ ಮೂಲಕ ಅಂಬೇಡ್ಕರ್ ವೃತ್ತದಲ್ಲಿ ಸಮಾವೇಶಗೊಂಡರು. ನಂತರ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಚಳಿಗಾಲ

ಈ ಸಂದರ್ಭದಲ್ಲಿ ಎಸ್‌ಎಫ್‌ಐ ತಾಲೂಕು ಅಧ್ಯಕ್ಷ ಮಹಾಲಿಂಗ ದೊಡ್ಡಮನಿ ಮಾತನಾಡಿ, “ಖಾಸಗಿ ಶಾಲಾ ಕಾಲೇಜುಗಳಿಗೆ ಕಡಿವಾಣ ಹಾಕುವ ಬದಲಾಗಿ ಸರ್ಕಾರಿ ಶಾಲೆಗಳನ್ನು ವಿಲೀನದ ಹೆಸರಿನಲ್ಲಿ ಬಂದ್ ಮಾಡಲು ಮುಂದಾಗುತ್ತಿರುವುದು ನಾಚಿಕೆಗೇಡಿನ ಸಂಗತಿ. ರಾಜ್ಯ ಸರ್ಕಾರಕ್ಕೆ ತಾಕತ್ತು ಇದ್ದರೆ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಶಿಕ್ಷಕರನ್ನು ಮೊದಲು ನೀಡಲಿ” ಎಂದು ಆಗ್ರಹಿಸಿದರು. ಚಳಿಗಾಲ

ಇದನ್ನೂ ಓದಿ: ಅಕ್ರಮ ಕಲ್ಲಿದ್ದಲು ಗಣಿಗಾರಿಕೆ: ಜಾರ್ಖಂಡ – ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಇಡಿ ದಾಳಿ

ಈ ಕೆಪಿಎಸ್ ಶಾಲೆಯಿಂದ ವಿಲೀನವಾಗುತ್ತಿರುವ ಶಾಲೆಗಳು ಸುಮಾರು 2ರಿಂದ 6 ಕಿಮೀ ದೂರದಲ್ಲಿದೆ. ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಕಡಿಮೆಯಾಗುತ್ತಿದೆ ಎಂದು ಸರ್ಕಾರ ಒಪ್ಪಿಕೊಂಡಿದೆ. ದಾಖಲಾತಿ ನೆಪಹೇಳಿ ಸರ್ಕಾರಿಶಾಲೆಗಳನ್ನು ಮುಚ್ಚುತ್ತಿದೆ. ಸರ್ಕಾರಿಶಾಲೆಯಲ್ಲಿ ದಾಖಲಾತಿ ಯಾಕೆ ಕಡಿಮೆಯಾಗುತ್ತಿದೆ ಎಂದು ಅಧ್ಯಯನ ಮಾಡದೇ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯ, ಶಿಕ್ಷಕರ ನೇಮಕಾತಿ

ಸರಿಯಾದ ಸಮಯಕ್ಕೆ ಪಠ್ಯ ಪುಸ್ತಕ ನೀಡದೆ ಹಾಗೂ ಸೈಕಲ್ ಯೋಜನೆ ನಿಲ್ಲಿಸಿರುವುದು ಹೀಗೆ ಯಾವುದೇ ಸೌಲಭ್ಯ ನೀಡದೆ ಸರ್ಕಾರ ಖಾಸಗಿಯವರ ಲಾಬಿಗೆ ಇಂದು ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ನಾಶ ಮಾಡಲು ಸರ್ಕಾರ ಮುಂದಾಗಿರುವುದು ಖಂಡನೀಯ ಎಂದರು

ಎಸ ಎಫ್ ಐ ಮಾಜಿ ಕೇಂದ್ರ ಸಮಿತಿ ಸದಸ್ಯ ಶಬ್ಬೀರ್ ಜಾಲಹಳ್ಳಿ ಮಾತನಾಡಿ, ರಾಜ್ಯದಲ್ಲಿರುವ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ಹಾಗೂ ಖಾಲಿ ಇರುವ 59,000 ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವ ಬದಲು ಕೆಪಿಸಿ ಹೆಸರಿನಲ್ಲಿ ಬಡವರ ಮಕ್ಕಳು ಓದುವ ಸರ್ಕಾರಿ ಶಾಲೆಗಳನ್ನು ಮುಚ್ಚುಲು ಹೊರಟಿರೋದು ನಾಚಿಕೆಗೇಡು. ಕೂಡಲೇ ಕೈ ಬಿಟ್ಟು ಸರ್ಕಾರಿ ಶಾಲಾ ಕಾಲೇಜುಗಳನ್ನು ಅಭಿವೃದ್ಧಿ ಪಡಿಸಿ ಗುಣಮಟ್ಟದ ಶಿಕ್ಷಣ ನೀಡಲು ಮುಂದಾಗಿ ಎಂದು ಹೇಳಿದರು.

ಇದೆ ಸಂದರ್ಭದಲ್ಲಿ ಎಸ್ ಎಫ್ ಐ ವಲಯ ಘಟಕ ಅಧ್ಯಕ್ಷ ಶಿವರಾಜ, ಕಾರ್ಯದರ್ಶಿ ರಂಗನಾಥ್, ಭಾಷಾ ಸಾಬ್. ಸಂತೋಷ್ ತ್ಯಾಪ್ಲಿ. ದಿಲ್ ಶಾದ್,ರೈತ ಸಂಘಟನೆಯ ತಾಲ್ಲೂಕು ಕಾರ್ಯದರ್ಶಿ ಮೌನೇಶ್ ಜಾಲಹಳ್ಳಿ. ರಂಗನಾಥ ಬುಂಕಲದೊಡ್ಡಿ. ಡಿವೈಎಫ್ಐ ಮುಖಂಡ ರಿಯಾಜ್ ಆರ್ಥಿ, ರಾಜು ನಾಯಕ, ಮುಕ್ತಂ ಪಾಷಾ. ಬಸವರಾಜ ವಂದಲಿ, ಮತ್ತು ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇದನ್ನೂ ನೋಡಿ: ಶಾಲಾ – ಕಾಲೇಜ್ ಸಮಯಕ್ಕೆ ಬಸ್ ಬಿಡಲು ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ Janashakthi Media

Donate Janashakthi Media

Leave a Reply

Your email address will not be published. Required fields are marked *