ಅಸ್ಸಾಂ ಕಲ್ಲಿದ್ದಲು ಗಣಿ ದುರಂತ: ಮೂವರ ಮೃತದೇಹಗಳು ಪತ್ತೆ

ಅಸ್ಸಾಂ: ಸೋಮವಾರ ಅಸ್ಸಾಂ ರಾಜ್ಯದ ದೀಮಾ ಹಸಾವೊ ಜಿಲ್ಲೆಯ ಉಮ್ರಾಂಗ್ಸೊ ಪ್ರದೇಶದ ಕಲ್ಲಿದ್ದಲು ಗಣಿಯಲ್ಲಿ ನಡೆದ ದುರಂತದಲ್ಲಿ ಮೃತಪಟ್ಟ ಮೂವರು ಕಾರ್ಮಿಕರ ಮೃತದೇಹಗಳು ಪತ್ತೆಯಾಗಿದೆ. ಇನ್ನೂ ಒಂಬತ್ತು ಮಂದಿ ಗಣಿಯೊಳಗೆ ಸಿಲುಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಸರಕಾರಿ ವರದಿಯ ಪ್ರಕಾರ, ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆಯ 30 ಸದಸ್ಯರ ತಂಡವೊಂದು ಘಟನಾ ಸ್ಥಳದಲ್ಲಿ ಬೀಡು ಬಿಟ್ಟಿದೆ. ಇದರೊಂದಿಗೆ, ರಾಜ್ಯ ವಿಪತ್ತು ಸ್ಪಂದನಾ ಪಡೆಯ ಎಂಟು ಸಿಬ್ಬಂದಿಗಳನ್ನು ಘಟನಾ ಸ್ಥಳದಲ್ಲಿ ನಿಯೋಜಿಸಲಾಗಿದೆ.

ರಕ್ಷಣಾ ಕಾರ್ಯಾಚರಣೆಗೆ ನೆರವು ನೀಡುವಂತೆ ನೌಕಾಪಡೆಯ ಮುಳುಗು ತಜ್ಞರಿಗೆ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಹೇಳಿದ್ದಾರೆ. “ಸ್ಥಳದಲ್ಲಿ ಬೀಡು ಬಿಟ್ಟಿರುವ ತಂಡದ ಮೌಲ್ಯಮಾಪನದ ಪ್ರಕಾರ, ಗಣಿಯೊಳಗಿನ ನೀರಿನ ಮಟ್ಟವು ಸುಮಾರು 100 ಅಡಿಗೆ ತಲುಪಿದೆ. ವಿಶಾಖಪಟ್ಟಣಂನಿಂದ ಮುಳುಗು ತಜ್ಞರು ಧಾವಿಸುತ್ತಿದ್ದು, ಅವರು ಆದಷ್ಟು ಶೀಘ್ರವಾಗಿ ಘಟನಾ ಸ್ಥಳ ತಲುಪುವ ನಿರೀಕ್ಷೆ ಇದೆ” ಎಂದು ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮೇಘಾಲಯದ ಗಡಿಗೆ ಹೊಂದಿಕೊಂಡಿರುವ ಅಸ್ಸಾಂನ ಅಕ್ರಮ ಗಣಿಯೊಂದಕ್ಕೆ ನೀರು ನುಗ್ಗಿದ್ದರಿಂದ, ಸುಮಾರು 18 ಮಂದಿ ಕಾರ್ಮಿಕರು ಗಣಿಯೊಳಗೆ ಸಿಲುಕಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಸುದ್ದಿ ತಿಳಿಯುತ್ತಿದ್ದಂತೆಯೆ ಸ್ಥಳಕ್ಕೆ ಧಾವಿಸಿದ್ದ ಪೊಲೀಸರು, ಎರಡು ಮೋಟರ್ ಪಂಪ್ ಗಳನ್ನು ಬಳಸಿ, ನೀರು ಹೊರ ಹಾಕುವ ಕೆಲಸಕ್ಕೆ ಚಾಲನೆ ನೀಡಿದ್ದರು.

ಇದನ್ನೂ ಓದಿ: ಬೀದಿ ಬದಿ ವ್ಯಾಪಾರಸ್ಥರ ಅನಿರ್ದಿಷ್ಟಾವಧಿ ಧರಣಿ

ಇನ್ನು ಕಲ್ಲಿದ್ದಲು ಗಣಿಯಲ್ಲಿ ಸಿಲುಕಿರುವವರ ರಕ್ಷಣೆಗೆ ಇದೇ ಸೇನೆ ಧುಮುಕಿದ್ದು, ‘ಸಿಕ್ಕಿಬಿದ್ದಿರುವ ಗಣಿಗಾರರನ್ನು ರಕ್ಷಿಸುವಲ್ಲಿ ನಾಗರಿಕ ಆಡಳಿತಕ್ಕೆ ಸಹಾಯ ಮಾಡಲು ಸೇನೆಯ ಪರಿಹಾರ ಅಂಕಣಗಳು ಮಂಗಳವಾರ ಮುಂಜಾನೆ ಉಮ್ರಾಂಗ್ಸೊ ತಲುಪಿವೆ ಎಂದು ಗುವಾಹಟಿ ಮೂಲದ ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಮಹೇಂದರ್ ರಾವತ್ ಹೇಳಿದ್ದಾರೆ.

ಕಲ್ಲಿದ್ದಲು ಗಣಿ ದುರಂತಗಳು ಈಶಾನ್ಯ ಭಾರತದಲ್ಲಿ ಸಾಮಾನ್ಯವಾಗಿದ್ದು, ಈ ಹಿಂದೆ ಜನವರಿ 2024 ರಲ್ಲಿ, ನಾಗಾಲ್ಯಾಂಡ್‌ನ ವೋಖಾ ಜಿಲ್ಲೆಯ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಬೆಂಕಿಯಲ್ಲಿ ಆರು ಕಾರ್ಮಿಕರು ಸಾವನ್ನಪ್ಪಿ, ನಾಲ್ವರು ಗಾಯಗೊಂಡಿದ್ದರು. ಅಂತೆಯೇ ಮೇ ತಿಂಗಳಲ್ಲಿ, ಅಸ್ಸಾಂನ ತಿನ್ಸುಕಿಯಾ ಜಿಲ್ಲೆಯಲ್ಲಿ ಗಣಿ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದರು.

ನಂತರ ಸೆಪ್ಟೆಂಬರ್ 2022 ರಲ್ಲಿ, ಅದೇ ಜಿಲ್ಲೆಯಲ್ಲಿ ಶಂಕಿತ ವಿಷಕಾರಿ ಅನಿಲ ಸೋರಿಕೆಯಾಗಿ ಮೂವರು ಕಲ್ಲಿದ್ದಲು ಗಣಿಗಾರರು ಕೊಲ್ಲಲ್ಪಟ್ಟರು. ಡಿಸೆಂಬರ್ 13, 2018 ರಂದು ಮೇಘಾಲಯದ ಕ್ಸಾನ್ ಪ್ರದೇಶದಲ್ಲಿ ಪ್ರವಾಹಕ್ಕೆ ಸಿಲುಕಿದ ಇಲಿ-ಹೋಲ್ ಕಲ್ಲಿದ್ದಲು ಗಣಿಯಲ್ಲಿ 15 ಕಾರ್ಮಿಕರು ಸಾವನ್ನಪ್ಪಿದ್ಜರು.

ಇದನ್ನೂ ನೋಡಿ: ಶೇ.60 ಕಮಿಷನ್ ಆರೋಪ ಸಾಬೀತು ಮಾಡಲಿ: ಎಚ್‌ಡಿಕೆಗೆ ಸಿಎಂ ಸಿದ್ದರಾಮಯ್ಯ ಸವಾಲು Janashakthi Media

Donate Janashakthi Media

Leave a Reply

Your email address will not be published. Required fields are marked *