ವಿಜಯಪುರ/ದಾವಣಗೆರೆ/ಮೈಸೂರು : ಈಗಾಗಲೇ ಹಲವುಕಡೆ ಬೇಸಿಗೆ ಪ್ರಾರಂಭವಾಗುವ ಮುನ್ನವೆ ಕುಡಿಯುವ ನೀರಿಗೆ ಹಾಹಾಕಾರ ಎದುರಾಗಿದೆ.
ಜನ – ಜಾನುವಾರು ಪರಿತಪಿಸುವಂತಾಗಿದೆ. ಕಳೆದ ಆರೇಳು ತಿಂಗಳುಗಳಿಂದ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದ 6 ಮತ್ತು 7ನೇ ವಾರ್ಡ್ಗಳಲ್ಲಿ ಕುಡಿಯುವ ನೀರಿಗಾಗಿ ಸಾಕಷ್ಟು ಸಮಸ್ಯೆ ಎದುರಾಗಿದೆ. ಕುಡಿವ ನೀರಿನ ಸಮಸ್ಯೆ ಬಗೆಹರಿಸುವಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಸ್ಥಳೀರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈ ಬಗ್ಗೆ ಗ್ರಾಮಸ್ಥರು ಸಾಕಷ್ಟು ಬಾರಿ ಮನವಿ ಮಾಡಿದ್ದಾರೆ. ಗ್ರಾಮದ ಮುಂಭಾಗದಲ್ಲೇ ಕಪಿಲಾ ನದಿ ಹಾದು ಹೋಗಿದ್ದರೂ ಕೂಡ ಹುಲ್ಲಹಳ್ಳಿ ಗ್ರಾಮದಲ್ಲಿ ಬೇಸಿಗೆಗೂ ಮುನ್ನ ಕುಡಿಯುವ ನೀರಿನ ಹಾಹಾಕಾರ ಎದುರಾಗಿದೆ. ಎಷ್ಟೇ ಮನವಿ ಮಾಡಿದರೂ ಅಧಿಕಾರಿಗಳ್ಯಾರು ಸ್ಪಂದಿಸುತ್ತಿಲ್ಲ ಎಂದು ಪಿಡಿಒ ಮತ್ತು ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಗ್ರಾಮ ಪಂಚಾಯಿತಿ ಒಳಗೆ ಪ್ರವೇಶ ಮಾಡದಂತೆ ದಿಗ್ಬಂಧನ ವಿಧಿಸಿ ಕಚೇರಿಗೆ ಬೀಗ ಜಡಿದು ಪ್ರತಿಭಟಿಸಿದರು.
ಇದನ್ನೂ ಓದಿ : ಸೋಷಿಯಲ್ ಮೀಡಿಯಾ ಪೋಸ್ಟ್‌ಗಳ ಮೇಲೆ ಎಫ್‌ಐಆರ್: ಪೊಲೀಸರಿಂದ ಮಾರ್ಗಸೂಚಿ ಬಿಡುಗಡೆ
ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ನೀರು, ಮೂಲ ಸೌಕರ್ಯಕ್ಕಾಗಿ ಸರ್ಕಾರದಿಂದ ಬರುವ ಹಣವನ್ನು ಅಧಿಕಾರಿಗಳು ಎಲ್ಲಿಗೆ ಬಳಸುತ್ತಾರೆಂದು ಕಿಡಿಕಾರಿದರು. ಗ್ರಾಮಸ್ಥ ಕಾಶಿ ಜವರನಾಯಕ ಮಾತನಾಡಿ, ಕಳೆದ ಒಂದು ತಿಂಗಳಿನಿಂದ ಹಲವು ಗ್ರಾಮಸ್ಥರು ನೀರಿಗಾಗಿ ಮನವಿ ಮಾಡಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಹುಲ್ಲಹಳ್ಳಿ ಪಿಡಿಒ ಶ್ರೀಧರ್, ನೀರಿನ ಸಮಸ್ಯೆಯನ್ನ ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ. ಅಲ್ಲದೇ ಕೆಲವೆಡೆ ಕಾಮಗಾರಿಯಿಂದ ನೀರಿನ ಸಮಸ್ಯೆ ಎದುರಾಗಿದೆ. ನೀರಿನ ಸಮಸ್ಯೆ ಬಗೆಹರಿಸಲಾಗುವುದು ಎಂದು ಮನವರಿಕೆ ಮಾಡಿದ್ದರಿಂದ ಪ್ರತಿಭಟನಾಕಾರರು ಪ್ರತಿಭಟನೆ ಕೈಬಿಟ್ಟರು ಎಂದು ಮಾಹಿತಿ ನೀಡಿದರು.
ವಾರಕ್ಕೆ ಒಮ್ಮೆ ಮಾತ್ರ ಗ್ರಾಮ ಪಂಚಾಯಿತಿ ನೀರು ಬಿಡುತ್ತಿದೆ. ಅದು ಕೇವಲ ಎರಡು ಗಂಟೆ ಮಾತ್ರ. 40 ಮನೆಗೆ ಒಂದು ನಲ್ಲಿ ಇರುವ ಇದೆ. ನೀರಿಗಾಗಿ ಜಗಳ ನಡೆಯುತ್ತಿವೆ. ಹೀಗಾದರೇ ಹೇಗೆ ಎಂದು ಆಕ್ರೋಶ ವ್ಯಕ್ತಪಡಿಸಿದ ಗೊಲ್ಲರಹಟ್ಟಿ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ತಾಲೂಕು ಪಂಚಾಯಿತಿ ಮುಂಭಾಗ ಪ್ರತಿಭಟನೆ ಮಾಡಿದ ಗ್ರಾಮಸ್ಥರು ಸ್ಥಳಕ್ಕೆ ಅಧಿಕಾರಿಗಳು ಬರುವಂತೆ ಪಟ್ಟು ಹಿಡಿದರು. ಕೂಡಲೇ ನೀರಿನ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದರು. ನೀರಿನ ಸಮಸ್ಯೆ ಬಗೆಹರಿಸುವಂತೆ ಪಟ್ಟು ಹಿಡಿದರು. ಕಳೆದ 8-9 ತಿಂಗಳಿನಿಂದ ನೀರಿಗಾಗಿ ಪರದಾಡಲಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ನಮ್ಮ ಕಡೆ ಗಮನ ನೀಡುತ್ತಿಲ್ಲ.
ದಾವಣಗೆರೆ ಜಿಲ್ಲೆಯಲ್ಲಿಯೂ ಬೇಸಿಗೆ ಪ್ರಾರಂಭವಾಗುವ ಮುನ್ನವೇ ಕುಡಿಯುವ ನೀರಿಗೆ ಹಾಹಾಕಾರ ಎದುರಾಗಿದೆ. ಜಗಳೂರು ತಾಲೂಕಿನ ಗೊಲ್ಲರಹಟ್ಟಿ ಗ್ರಾಮದಲ್ಲಿ ಕುಡಿಯುವ ನೀರಗಾಗಿ ಜನ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ತಾಲೂಕು ಪಂಚಾಯಿತಿ ಮುಂಭಾಗ ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿದರು.

ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಹಳ್ಳದ ಗೆಣ್ಣೂರ ಗ್ರಾಮದ ಬಳಿ ಮುಳವಾಡ ಏತ ನೀರಾವರಿ ಯೋಜನೆಯ ಮೊದಲಹಂತದ ಕಾಲುವೆ ಒಡೆದು ಅಪಾರ ಪ್ರಮಾಣದ ಬೆಳೆ ಹಾನಿ ಆದ ಘಟನೆ ನಡೆದಿದೆ. ನೀರು ನುಗ್ಗಿ ಹತ್ತಾರು ಎಕೆರೆ ಜಮೀನಿನಲ್ಲಿದ್ದ ಬೆಳೆಗಳು ಸಂಪೂರ್ಣ ಹಾನಿ ಆಗಿದ್ದು, ಕಾಲುವೆ ನೀರಿನ ತೀವ್ರತೆಗೆ ಫಲವತ್ತಾದ ಮಣ್ಣು ಸಹ ಕೊಚ್ಚಿಕೊಂಡು ಹೋಗಿದೆ. ಕಟಾವಿಗೆ ಬಂದಿದ್ದ ಗೋಧಿ, ಈರುಳ್ಳಿ, ಕಬ್ಬು ಸೇರಿದಂತೆ ಇತರ ಬೆಳೆಗಳು ಸಂಪೂರ್ಣ ಹಾನಿ ಆಗಿವೆ. ಅಧಿಕಾರಿಗಳ ನಿರ್ಲಕ್ಷ್ಯದ ಕಾರಣದಿಂದ ಲಕ್ಷಾಂತರ ಮೌಲ್ಯದ ಫಸಲು ನೀರು ಪಾಲಾಗಿದೆ. ಹಾಗಾಗಿ ಹಾನಿಯಾದ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಸ್ಥಳೀಯ ಮುಖಂಡರು ಒತ್ತಾಯಿಸಿದರು.
ಇದನ್ನೂ ನೋಡಿ : ಫೆ12ರ ಮುಷ್ಕರ | ಕೃಷಿ ರೈತರದ್ದು, ಕಾರ್ಪರೇಟ್ ಕಂಪನಿಗಳದ್ದು ಅಲ್ಲ | ಸಿದ್ಧನಗೌಡ ಪಾಟೀಲ್ | ಗುರುರಾಜ ದೇಸಾಯಿ
