₹1.12 ಲಕ್ಷ ಕೋಟಿಗಳನ್ನು ಗ್ಯಾರಂಟಿ ಯೋಜನೆಗಳಿಗೆ ಖರ್ಚು ಮಾಡಿದ್ದೇವೆ: ಸಿಎಂ ಸಿದ್ದರಾಮಯ್ಯ

ಹಾವೇರಿ : ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಆಗಿದೆ. ಸರ್ಕಾರದಿಂದ ₹1.12 ಲಕ್ಷ ಕೋಟಿಗಳನ್ನು ಗ್ಯಾರಂಟಿ ಯೋಜನೆಗಳಿಗೆ ಖರ್ಚು ಮಾಡಿದ್ದೇವೆ. ಆದರೂ ನಮ್ಮ‌ ಸರ್ಕಾರ ಆರ್ಥಿಕವಾಗಿ ದಿವಾಳಿ ಆಗಿಲ್ಲ ಎಂದು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಗ್ಯಾರಂಟಿ ಯೋಜನೆಗಳಿಗಾಗಿ ಪ್ರತಿ ವರ್ಷ ₹52 ಸಾವಿರ ಕೋಟಿ ಖರ್ಚು ಮಾಡುತ್ತಿದೆ. ಜನರಲ್ಲಿ ತಪ್ಪು ಕಲ್ಪನೆ ಬಿಂಬಿಸುವ ಕೆಲಸ ಆಗಬಾರದು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಆಗಿದೆ.

ಇದನ್ನೂ ಓದಿ: ಅಹನಾಳ ದುರಂತದಿಂದ ಕಲಿಯಬೇಕಾದ ಪಾಠ: ಜಂಕ್ ಫುಡ್ಡನ್ನು ಜಂಕ್ ಮಾಡಿ

ಸರ್ಕಾರದಿಂದ ₹1.12 ಲಕ್ಷ ಕೋಟಿಗಳನ್ನು ಗ್ಯಾರಂಟಿ ಯೋಜನೆಗಳಿಗೆ ಖರ್ಚು ಮಾಡಿದ್ದೇವೆ. ಆದರೂ ನಮ್ಮ‌ ಸರ್ಕಾರ ಆರ್ಥಿಕವಾಗಿ ದಿವಾಳಿ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ನಮ್ಮ ಸರ್ಕಾರ ಯಾವುದೆ ತಾರತಮ್ಯ ಇಲ್ಲದೇ ಎಲ್ಲರನ್ನೂ ಸಮಾನವಾಗಿ ಕಾಣುತ್ತದೆ. ಹಾಗಾಗಿ, ಎಲ್ಲ ಧರ್ಮ, ಜಾತಿಯ ಬಡವರಿಗೆ ಗ್ಯಾರಂಟಿ ಜಾರಿಗೊಳಿಸಿದ್ದೇವೆ. ಕಟ್ಟಕಡೆಯ ವ್ಯಕ್ತಿಗೂ ಮೂಲ ಸೌಲಭ್ಯ ಸಿಗಬೇಕು. ಆಗ ಮಾತ್ರ ಜಾತ್ಯತೀತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದರು.

ಇದನ್ನೂ ನೋಡಿ: KBL ಕ್ಯಾಂಟೀನ್ | ಇಲ್ಲಿ 1ರೂ ಗೆ ಹೊಟ್ಟೆ ತುಂಬುವಷ್ಟು ಟಿಫನ್ ಸಿಗುತ್ತೆ! Janashakthi Media

Donate Janashakthi Media

Leave a Reply

Your email address will not be published. Required fields are marked *