ಆದೇಶ ಪಾಲಿಸದ ಕಲ್ಯಾಣ ಮಂಡಳಿ: ಅಸಮಾಧಾನಗೊಂಡ ನ್ಯಾಯಾಧೀಶರು

ಬೆಂಗಳೂರು: ಬಡ ಕಟ್ಟಡ ಕಾರ್ಮಿಕ‌ರ ಮಕ್ಕಳಿಗೆ‌ ಧನಸಹಾಯ ನೀಡಲು ಹೈಕೋರ್ಟ್ ನೀಡಿದ್ದ ‌ಮಧ್ಯಂತರ ಆದೇಶ ಜಾರಿ ಮಾಡಲು ವಿಫಲವಾದ‌ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ವಿರುದ್ದ ನ್ಯಾಯಾಧೀಶರು ತೀವ್ರ ಅಸಮಾಧಾನಗೊಂಡಿದ್ದಾರೆ.

ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯು ಶೈಕ್ಷಣಿಕ ಧನಸಹಾಯ‌ ಕಡಿತ ಮಾಡಿರುವುದರಿಂದ ನಮ್ಮ ವಿದ್ಯಾಭ್ಯಾಸ ಮುಂದುವರೆಸಲು ಕಷ್ಟವಾಗಿರುವ ಸಂಗತಿಯನ್ನು ಬೆಂಗಳೂರಿನ ಲ್ಲಿ ವಿದ್ಯಾಬ್ಯಾಸ ಮಾಡುತ್ತಿರುವ ಇಬ್ಬರು ಕಟ್ಟಡ ಕಾರ್ಮಿಕರ‌ ಮಕ್ಕಳು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ಮೂಲಕ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಇಲಿ ಬಿದ್ದ ಪಲ್ಯ ಸೇವನೆ : ಇತ್ತ ಫುಡ್‌ ಪಾಯಿಸನ್‌ ನಿಂದ ವಿದ್ಯಾರ್ಥಿಗಳು ಅಸ್ವಸ್ಥ

ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ‌ನಾಗಪ್ರಸನ್ನ ಅವರ ಏಕಸದಸ್ಯ ಪೀಠ ನಾಲ್ಕು ವಾರದೊಳಗೆ ಎಲ್.ಎಲ್.ಬಿ ಹಾಗೂ ಎಂ.ಬಿ.ಎ ವಿದ್ಯಾಭ್ಯಾಸ ಮಾಡುವ ಇಬ್ಬರು ವಿದ್ಯಾರ್ಥಿನಿಯರಿಗೆ ದಂಡಸಹಿತ ಶೈಕ್ಷಣಿಕ ಧನಸಹಾಯ ಪಾವತಿಸಲು ಕಳೆದ‌ ಏಪ್ರಿಲ್ 23 ರಂದು ಆದೇಶಿಸಿತ್ತು.

ಆದರೆ ಆದೇಶವಾದ ನಾಲ್ಕುವಾರದ ಬಳಿಕಾವೂ ಮಧ್ಯಂತರ ಆದೇಶ ಪಾಲನೆಯಾಗದಿರುವ ಕುರಿತು ಇಂದು ಅರ್ಜಿದಾರರ ಪರ ವಕೀಲರಾದ ಆದಿತ್ಯ ಚಟರ್ಜಿ ನ್ಯಾಯಮೂರ್ತಿಗಳ ಗಮನಕ್ಕೆ ತಂದರು. ಮಂಡಳಿ ಪರವಾಗಿ ಹಾಜರಿದ್ದ ವಕೀಲರನ್ನು ಈ ಬಗ್ಗೆ ನ್ಯಾಯಮೂರ್ತಿಗಳು ಪ್ರಶ್ನಿಸಿದಾಗ ಹಣ ಪಾವತಿ ಯಾಗಿಲ್ಲ ಎನ್ನುವುದನ್ನು  ಒಪ್ಪಿಕೊಂಡರು.

ಇದರಿಂದ ಅಸಮಾಧಾನಗೊಂಡ‌ ನ್ಯಾಯಮೂರ್ತಿಗಳು ಬಡ ಕಾರ್ಮಿಕರ‌ ಮಕ್ಕಳ ವಿದ್ಯಾಭ್ಯಾಸಕ್ಕೆ ಆದೇಶ‌ ನೀಡಿದ 30 ಸಾವಿರ ರೂ. ಗಳನ್ನು ನೀಡಲು ಸಾಧ್ಯವಾಗದ ಕಲ್ಯಾಣ ಮಂಡಳಿಯ ವಿರುದ್ಧ ತೀವ್ರ ಕ್ರಮಕ್ಕೆ ಮುಂದಾಗುವ ಎಚ್ಚರಿಕೆ ನೀಡಿದರು.

ಬಿಸಿಲು ಮಳೆಯಲ್ಲಿ ಶ್ರಮಪಡುವ ಕಟ್ಟಡ ಕಾರ್ಮಿಕರ ದುಡಿಮೆಯಿಂದಾಗಿ ಸಾವಿರಾರು ಕೋಟಿ ಸೆಸ್ ಸಂಗ್ರಹವಾಗುತ್ತಿದೆ ಅದನ್ನು ಅವರ‌ ಮಕ್ಕಳ ವಿದ್ಯಾಬ್ಯಾಸಕ್ಕೆ ಖರ್ಚು‌ಮಾಡಬೇಕೇ ಹೊರತು ಅಧಿಕಾರಿಗಳ ಓಡಾಟ‌ ಮತ್ತು ಐಶಾರಾಮಿ ಜೀವನಕ್ಕಲ್ಲ  ಎಂದು‌  ನ್ಯಾಯಾಧೀಶರು ತಾಕೀತು ಮಾಡಿದ್ದಾರೆ.

ಮಂಡಳಿಯಲ್ಲಿ ಸಂಗ್ರಹವಾಗುತ್ತಿರುವ ಸೆಸ್ ಹಣವನ್ನು ಯಾವುದಕ್ಕೆಲ್ಲ ಖರ್ಚು ಮಾಡುತ್ತಿದೆ ಎಂದು ಪ್ರಶ್ನಿಸಿದಾಗ ಈ ಬಗ್ಗೆ ಪೀಠದ ಮುಂದೆ ಸಲ್ಲಿಸಲಾದ ಅರ್ಜಿಯಲ್ಲಿ ವಿವರ ನೀಡಲಾಗಿದೆ ಎಂದು ಹೇಳಿದ ಮಂಡಳಿ ಪರ ವಕೀಲರ ವಾದವನ್ನು ತಳ್ಳಿ ಹಾಕಿದೆ ನ್ಯಾಯಾಧೀಶರು ಮುಂದಿನ ವಿಚಾರಣೆಯ ಸಂದರ್ಭದಲ್ಲಿ ಕಲ್ಯಾಣ ಮಂಡಳಿಯಲ್ಲಿ ಸಂಗ್ರಹವಾಗಿರುವ ರೂ 6700 ಕೋಟಿ ಸೆಸ್ ಹಣ,ಅದು ಹೊಂದಿರುವ‌ ಬ್ಯಾಂಕ್ ಖಾತೆಯ ವಿವರಗಳು ಹಾಗೂ ಯಾವ ಸೌಲಭ್ಯಗಳಿಗೆ ಎಷ್ಟು ಖರ್ಚು ಮಾಡಲಾಗುತ್ತಿದೆ ಎನ್ನುವ ವಿವರಗಳನ್ನು ಒಳಗೊಂಡ ಅಫಿಡವಿಟ್ ಅನ್ನು ಪೀಠದ ಮುಂದೆ ಸಲ್ಲಿಸುವಂತೆ ಮೌಖಿಕವಾಗಿ ಆದೇಶಿಸಿ ಇದೇ ಜೂನ್ 14 ರಂದು ವಿಚಾರಣೆಯನ್ನು ಮೂಂದೂಡಿದರು.

ಇದನ್ನೂ ನೋಡಿ: ಪರಿಸರ ಸಂರಕ್ಷಣೆ ನಮ್ಮ ಹೊಣೆ : ಮರುಭೂಮಿಯಾಗದಂತೆ ನೋಡಿಕೊಳ್ಳೋಣ Janashakthi Media

Donate Janashakthi Media

Leave a Reply

Your email address will not be published. Required fields are marked *