ಕೋಲ್ಕತ್ತ: ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ಗುರುವಾರ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಡೆಯಲಿದೆ. ಈ ಸಂಬಂಧ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿಗೊಳಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಹಿರಿಯ ಅಧಿಕಾರಿಯೊಬ್ಬರು, ‘ಚುನಾವಣಾ ಆಯೋಗವು ಹೆಲಿಕಾಪ್ಟರ್ ಸಹಾಯದಿಂದ ನಂದಿಗ್ರಾಮ ಕ್ಷೇತ್ರವ್ಯಾಪ್ತಿಯಲ್ಲಿ ವಾಯು ಕಣ್ಗಾವಲು ಕಾರ್ಯವನ್ನು ಪ್ರಾರಂಭಿಸಿದೆ’ ಎಂದು ತಿಳಿಸಿದ್ದಾರೆ.
ಇದನ್ನು ಓದಿ : ಸಿಪಿಐ(ಎಂ) ಪಕ್ಷ ಮಸುಕಾಗದೆ ಉಳಿದಿದೆ – ಜನರಲ್ಲಿ ಭರವಸೆ ಮೂಡಿದೆ : ಮೀನಾಕ್ಷಿ ಮುಖರ್ಜಿ
ನಂದಿಗ್ರಾಮದ ಮತದಾರರಲ್ಲದ ಜನರು ಕ್ಷೇತ್ರದೊಳಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ. ಶುಕ್ರವಾರದ ಮಧ್ಯರಾತ್ರಿಯವರೆಗೂ ನಿಷೇಧಾಜ್ಞೆ ಜಾರಿ ಇರಲಿದೆ ಎಂದು ಅಧಿಕಾರಿ ಹೇಳಿದ್ದಾರೆ. ‘ನಂದಿಗ್ರಾಮವನ್ನು ಪ್ರವೇಶಿಸಿರುವ ಇತರೆ ರಾಜ್ಯಗಳ ಗೂಂಡಾಗಳು, ಇಲ್ಲಿನ ಮತದಾರರನ್ನು ಬೆದರಿಸಿ, ತೊಂದರೆ ಕೊಡುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಹಲವು ಪಕ್ಷಗಳು ಆಗ್ರಹಿಸಿದ್ದವು.
ಇದನ್ನು ಓದಿ : 14 ವರ್ಷಗಳ ನಂತರ ನಂದಿಗ್ರಾಮ ‘ಗೋಲೀಬಾರ್’ನ ಪಿತೂರಿ ಬಯಲು?
ಪಶ್ಚಿಮ ಬಂಗಾಳದ ಅತ್ಯಂತ ಪ್ರಭಾವಿ ಕ್ಷೇತ್ರಗಳಲ್ಲಿ ಒಂದಾದ ನಂದಿಗ್ರಾಮ ವಿಧಾನಸಭಾ ಕ್ಷೇತ್ರ ಇಡೀ ದೇಶಕ್ಕೆ ಪ್ರತಿಷ್ಠೆಯ ಕ್ಷೇತ್ರವಾಗಿದೆ. ಏಕೆಂದರೆ ಇಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಬಿಜೆಪಿ ಸುವೇಂದು ಅಧಿಕಾರಿ ಕಣದಲ್ಲಿದ್ದರೂ ಸಹ ಸಿಪಿಐ(ಎಂ) ಪಕ್ಷದಿಂದ ಸ್ಪರ್ಧಿಸಿರುವ ಯುವ ನಾಯಕಿ ಮೀನಾಕ್ಷಿ ಮುಖರ್ಜಿ ಅವರ ಬಿರುಸಿನ ಪ್ರಚಾರವನ್ನು ನಡೆಸಿದ್ದಾರೆ.