ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿಯಿಲ್ಲ, ಟಿಎಂಸಿ ಏಕಾಂಗಿಯಾಗಿ ಸ್ಪರ್ಧೆ – ಮಮತಾ ಬ್ಯಾನರ್ಜಿ

ಕೊಲ್ಕತ್ತಾ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದ್ದು, ಸೀಟು ಹಂಚಿಕೆ ಕುರಿತು ಕಾಂಗ್ರೆಸ್‌ನೊಂದಿಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಎಂದು ತೃಣಮೂಲ ಕಾಂಗ್ರೆಸ್ ಪಕ್ಷದ ವರಿಷ್ಠೆ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ ಹೇಳಿದ್ದಾರೆ. ಬುರ್ದ್ವಾನ್‌ನಲ್ಲಿ ನಡೆದ ಆಡಳಿತ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವ ಮೊದಲು ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು.

ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ನಡೆಸುವ ನ್ಯಾಯ ಯಾತ್ರೆಯ ವೇಳಾಪಟ್ಟಿಯ ಬಗ್ಗೆ ತಮಗೆ ತಿಳಿಸದೆ ಇರುವ ಬಗ್ಗೆ ತೀವ್ರ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಮೈತ್ರಿಯ ಸಲುವಾಗಿ, ಪಶ್ಚಿಮ ಬಂಗಾಳದಲ್ಲಿ ನ್ಯಾಯ್ ಯಾತ್ರೆಯ ವೇಳಾಪಟ್ಟಿಯ ಬಗ್ಗೆ ನನಗೆ ತಿಳಿಸಬಹುದಿತ್ತು. ಆದರೆ ನನಗೆ ಏನೂ ಮಾಹಿತಿ ನೀಡಿಲ್ಲ” ಎಂದು ಮುಖ್ಯಮಂತ್ರಿ ಮಮತಾ ಹೇಳಿದ್ದಾರೆ.

ಇದನ್ನೂ ಓದಿ: ಉಮರ್ ಖಾಲಿದ್ ಜಾಮೀನು ಅರ್ಜಿ ವಿಚಾರಣೆ 11ನೇ ಬಾರಿಗೆ ಮುಂದೂಡಿದ ಸುಪ್ರೀಂಕೋರ್ಟ್!

300 ಸ್ಥಾನಗಳಲ್ಲಿ ಸ್ಪರ್ಧಿಸಲು ಮತ್ತು ಉಳಿದವುಗಳನ್ನು ಇತರ ಪ್ರಾದೇಶಿಕ ಪಕ್ಷಗಳಿಗೆ ಬಿಟ್ಟುಕೊಡಲು ಕಾಂಗ್ರೆಸ್‌ಗೆ ಪ್ರಸ್ತಾವನೆಯನ್ನು ನೀಡಿದ್ದೇನೆ ಅವರು ಹೇಳಿದ್ದಾರೆ. ಈಗ ನಾವು ಪ್ರಾದೇಶಿಕ ಪಕ್ಷಗಳು ಲೋಕಸಭಾ ಚುನಾವಣೆ ಮುಗಿದ ನಂತರವೇ ಮುಂದಿನ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ. ಪ್ರಾದೇಶಿಕ ಪಕ್ಷಗಳು ಒಗ್ಗಟ್ಟಾಗಿಯೇ ಇರುತ್ತವೆ ಎಂದು ಅವರು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮಾತ್ರವಲ್ಲ, ಕೇರಳದಲ್ಲಿ ಇಂಡಿಯಾ ಒಕ್ಕೂಟದ ಪಾಲುದಾರ ಪಕ್ಷವಾದ ಸಿಪಿಐ(ಎಂ) ಕೂಡಾ ಕಾಂಗ್ರೆಸ್ ಜೊತೆ ಸೀಟು ಹಂಚಿಕೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಆನ್‌ ಆದ್ಮಿ ಪಕ್ಷ ದೆಹಲಿಯಲ್ಲಿ ಇದೇ ಸೂತ್ರವನ್ನು ಮುಂದಿಟ್ಟಿದೆ.

ಇದನ್ನೂ ಓದಿ: ಮತ್ತೆ ಬಿಜೆಪಿ ಪಾಳಯ ಸೇರಿದ ಕಾಂಗ್ರೆಸ್ ಎಮ್‌ಎಲ್‌ಸಿ ಜಗದೀಶ್ ಶೆಟ್ಟರ್!

ಪಶ್ಚಿಮ ಬಂಗಾಳದಲ್ಲಿ ಏಕಾಂಗಿಯಾಗಿ ಕಣಕ್ಕಿಳಿಯುವ ಬಗ್ಗೆ ಇತ್ತೀಚಿಗೆ ಮಮತಾ ಅವರು ಸುಳಿವುಗಳನ್ನು ನೀಡಿದ್ದರು. ಜನವರಿ 19 ರಂದು ಪಕ್ಷದ ಆಡಳಿತ ಪರಿಶೀಲನಾ ಸಭೆಯಲ್ಲಿ ತೃಣಮೂಲ ಕಾಂಗ್ರೆಸ್‌ನ ಸಾಂಸ್ಥಿಕ ಸಭೆಯಲ್ಲಿ ಇಂಡಿಯಾ ಒಕ್ಕೂಟವು ಗಂಭೀರವಾಗಿ ತೆಗೆದುಕೊಳ್ಳದಿದ್ದರೆ ಪಕ್ಷವೂ ರಾಜ್ಯದ ಎಲ್ಲಾ 42 ಲೋಕಸಭಾ ಕ್ಷೇತ್ರಗಳಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧವಾಗಿದೆ ಎಂದು ಹೇಳಿದ್ದರು.

ಜನವರಿ 22 ರಂದು ಮತ್ತೆ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಅವರು, ಇಂಡಿಯಾ ಒಕ್ಕೂಟದ ಸಭೆಗಳ ಅಜೆಂಡಾ ನಿಯಂತ್ರಿಸಲು ಸಿಪಿಐ(ಎಂ)ಗೆ ಕಾಂಗ್ರೆಸ್ ಅವಕಾಶ ಮಾಡಿಕೊಟ್ಟಿದೆ ಎಂದು ಆರೋಪಿಸಿದ್ದರು.

ಈ ಮಧ್ಯೆ, ಪಶ್ಚಿಮ ಬಂಗಾಳದ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಮತ್ತು ಐದು ಬಾರಿ ಲೋಕಸಭೆ ಸದಸ್ಯರಾಗಿರುವ ಅಧೀರ್ ರಂಜನ್ ಚೌಧರಿ ಕೂಡ ಮುಖ್ಯಮಂತ್ರಿ ವಿರುದ್ಧ ತಮ್ಮ ವಾಗ್ದಾಳಿಯನ್ನು ಮುಂದುವರೆಸಿದ್ದರು. ಚೌಧರಿ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮ್ಮ ವಿರುದ್ಧ ಸ್ಪರ್ಧಿಸುವಂತೆ ಮಮತಾ ಬ್ಯಾನರ್ಜಿಗೆ ಸವಾಲು ಹಾಕುವ ಮಟ್ಟಕ್ಕೂ ಹೋಗಿದ್ದಾರೆ.

ವಿಡಿಯೊ ನೋಡಿ: #ಮಂಗಳೂರು – ರಾಷ್ಟ್ರ ಧ್ವಜ ಹಾರಿಸುವ ಅಶೋಕ ಸ್ಥಂಬದಲ್ಲಿ #ಆರೆಸ್ಸೆಸ್‌ ಬಾವುಟ ಹಾರಿಸಿದ ಕಿಡಿಗೇಡಿಗಳು

Donate Janashakthi Media

Leave a Reply

Your email address will not be published. Required fields are marked *