‘ನಿಮಗೆ ರಾಷ್ಟ್ರ ಮುಖ್ಯವೋ-ಧರ್ಮ ಮುಖ್ಯವೋ’: ಮದ್ರಾಸ್​​ ಹೈಕೋರ್ಟ್​ ಪ್ರಶ್ನೆ

ಚೆನ್ನೈ: ತಮಿಳುನಾಡಿನ ದೇವಾಲಯಗಳಿಗೆ ಹಿಂದೂಗಳಲ್ಲದವರು ಪ್ರವೇಶಿಸದಂತೆ ನಿರ್ಬಂಧ ವಿಧಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್,  ʻರಾಷ್ಟ್ರವೋ ಅಥವಾ ಧರ್ಮವೋʼ ಯಾವುದು ಮುಖ್ಯ ಎಂದು ಪ್ರಶ್ನಿಸಿದೆ.

ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಂ.ಎನ್.ಭಂಡಾರಿ ಮತ್ತು ನ್ಯಾಯಮೂರ್ತಿ ಡಿ.ಭರತ ಚಕ್ರವರ್ತಿ ಅವರಿದ್ದ ಪೀಠವು, ಧಾರ್ಮಿಕ ವಿಚಾರಗಳಲ್ಲಿ ಕೆಲವೊಂದು ಬೆಳವಣಿಗೆಗಳ ಬಗ್ಗೆ ಕಳವಳವನ್ನು ವ್ಯಕ್ತಪಡಿಸಿದೆ. ಧರ್ಮದ ಆಧಾರದಲ್ಲಿ ದೇಶ ಒಡೆಯುವ ಯತ್ನಗಳು ನಡೆಯುತ್ತಿವೆ ಎಂಬುದನ್ನು ಇತ್ತೀಚಿನ ಘಟನೆಗಳು ತೋರಿಸುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದೆ.

ದೇವಾಲಯಗಳಲ್ಲಿ ವಸ್ತ್ರ ಸಂಹಿತೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಅರ್ಜಿಯ ಬಗ್ಗೆ ಅಚ್ಚರಿ ಮೂಡಿಸಿರುವ ನ್ಯಾಯಪೀಠವು ಕೆಲವರು ಹಿಜಬ್‌ಗಾಗಿ ಹೋಗುತ್ತಾರೆ. ಮತ್ತೆ ಕೆಲವರು ಟೋಪಿಗಾಗಿ ಹೋರಾಡುತ್ತಾರೆ. ಇನ್ನೂ ಕೆಲವರು ತಮಗೆ ಅಗತ್ಯವಿರುವುದಕ್ಕಾಗಿ ಪ್ರತಿಭಟಿಸುತ್ತಾರೆ. ಇದು ಒಂದು ರಾಷ್ಟ್ರವೋ ಅಥವಾ ಧರ್ಮದಿಂದ ವಿಭಜನೆಯಾಗಿದೆಯೋ ಅಥವಾ ಬೇರೆ ಇನ್ಯಾವುದೋ ಎಂದು ಖಾರವಾಗಿ ಪ್ರಶ್ನಿಸಿದೆ.

ಇತ್ತೀಚೆಗಿನ ವಿದ್ಯಮಾನಗಳಿಂದ ಕಂಡು ಬರುತ್ತಿರುವುದು ಧರ್ಮದ ಹೆಸರಿನಲ್ಲಿ ದೇಶವನ್ನು ಒಡೆಯುವ ಪ್ರಯತ್ನವಲ್ಲದೆ ಬೇರೇನೂ ಅಲ್ಲವೆಂದು ಮುಖ್ಯ ನ್ಯಾಯಮೂರ್ತಿ  ಎಂ.ಎನ್ ಭಂಡಾರಿ ಕಳವಳ ವ್ಯಕ್ತಪಡಿಸಿದ್ದಾರೆ.

ತಿರುಚಿರಾಪಳ್ಳಿ ಜಿಲ್ಲೆಯ ಶ್ರೀರಂಗಂನ ರಂಗರಾಜನ್ ನರಸಿಂಹನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಇದಾಗಿದ್ದು, ಭಕ್ತರಿಗೆ ವಸ್ತ್ರ ಸಂಹಿತೆ ರೂಪಿಸಬೇಕೆಂದು ಮನವಿ ಮಾಡಲಾಗಿದೆ. ಈ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಮದ್ರಾಸ್ ಹೈಕೋರ್ಟ್  ಹತ್ತು ದಿನಗಳ ಕಾಲ ವಿಚಾರಣೆ ಮುಂದೂಡಿದೆ. ಇನ್ನು, ಇದರ ಜೊತೆಗೆ ರಾಜ್ಯದಲ್ಲಿನ ಹಿಜಾಬ್ ವಿವಾದ ಬಗ್ಗೆಯೂ ಮದ್ರಾಸ್​ ಹೈಕೋರ್ಟ್‌ನಲ್ಲಿ ಪ್ರಸ್ತಾಪವಾಗಿದೆ.

ಅರ್ಜಿದಾರರ ಪಟ್ಟುಬಿಡದ ನಿಲುವಿನ ಬಗ್ಗೆ ಸಿಟ್ಟಿಗೆದ್ದ ಪೀಠವು, ನ್ಯಾಯಾಲಯದ ಮುಂದೆ ಖುದ್ದಾಗಿ ಹಾಜರಾಗುವುದನ್ನು ತಡೆಯುವ ಎಚ್ಚರಿಕೆಯನ್ನು ನೀಡಿತು ಮತ್ತು ಸೂಕ್ತ ಪದಗಳನ್ನು ಬಳಸಿ ಮತ್ತು ಜಗಳವಾಡುವುದನ್ನು ನಿಲ್ಲಿಸುವಂತೆ ಸೂಚಿಸಿತು.

ಪ್ರತಿಯೊಂದು ದೇವಾಲಯವೂ ತನ್ನದೇ ಆದ ಸಂಪ್ರದಾಯವನ್ನು ಅನುಸರಿಸುತ್ತಿದೆ ಮತ್ತು ಇತರ ಧರ್ಮದ ಸಂದರ್ಶಕರನ್ನು ‘ಕೋಡಿ ಮರಮ್’ (ಧ್ವಜಸ್ತಂಭ) ವರೆಗೆ ಮಾತ್ರ ಅನುಮತಿಸಲಾಗಿದೆ ಎಂದು ತಮಿಳುನಾಡು ಅಡ್ವೊಕೇಟ್ ಜನರಲ್ ಆರ್ ಷಣ್ಮುಗಸುಂದರಂ ನ್ಯಾಯಾಲಯಕ್ಕೆ ತಿಳಿಸಿದರು.

Donate Janashakthi Media

Leave a Reply

Your email address will not be published. Required fields are marked *