ಮಣಿಪುರ ಹೊತ್ತಿ ಉರಿಯುತ್ತಿದ್ದರೆ ಬಿಜೆಪಿ ಪ್ರಚಾರದಲ್ಲಿ ನಿರತವಾಗಿದೆ:ಕಾಂಗ್ರೆಸ್‌ ಅಧ್ಯಕ್ಷ ಖರ್ಗೆ ಆರೋಪ

ಹೊಸದಿಲ್ಲಿ: ಮಣಿಪುರ ಹೊತ್ತಿ ಉರಿಯುತ್ತಿದ್ದರೆ,ಬಿಜೆಪಿ ಮಾತ್ರ ಬೇರೆ ಬೇರೆ ರಾಜ್ಯಗಳಲ್ಲಿ ಚುನಾವಣಾ ಪ್ರಚಾರ ಮಾಡುತ್ತಿದೆ ಎಂದು ಕಾಂಗ್ರೆಸ್‌  ಅಧ್ಯಕ್ಷ ಖರ್ಗೆ ಆರೋಪಿಸಿದ್ದಾರೆ.

ಕಾಂಗ್ರೆಸ್‌ ಕಾರ್ಯಕರ್ತೆಯರ ಸಭೆಯಲ್ಲಿ ಭಾಗವಹಿಸಿದ ಖರ್ಗೆಯವರು ಮಾತನಾಡಿ ಮುಂಬರುವ 2024 ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಕಿತ್ತೊಗೆಯಲು ಕಾರ್ಯಕರ್ತರು ಶ್ರಮವಹಿಸಿ ದುಡಿಯಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಕರೆ ಕಾರ್ಯಕರ್ತೆಯರಿಗೆ ನೀಡಿದರು.

2024ರ  ಲೋಕಸಭಾ ಚುನಾವಣೆಯನ್ನು ಹೊಸ ಆಲೋಚನೆ ಕಾರ್ಯತಂತ್ರಗಳೊಂದಿಗೆ ನಮ್ಮ ಕಾರ್ಯಕರ್ತೆಯರು ಎದುರಿಸಲಿದ್ದಾರೆ.ಅವರು ಈ ಚುನಾವಣೆಯಲ್ಲಿ ಬಿಜೆಪಿಯನ್ನು ಕಿತ್ತೊಗೆಯುತ್ತಾರೆ ಎಂಬ ನಂಬಿಕೆ ಇದೆ ಎಂದು ಖರ್ಗೆ ತಿಳಿಸಿದ್ದಾರೆ.

ಇದನ್ನೂ ಓದಿ:ಮಣಿಪುರ ವಿಷಯದಲ್ಲಿ ಮೋದಿಯವರೇ ನಿಮ್ಮ ಮೌನವನ್ನು ಭಾರತ ಎಂದಿಗೂ ಕ್ಷಮಿಸುವುದಿಲ್ಲ:ಮಲ್ಲಿಕಾರ್ಜುನ ಖರ್ಗೆ

ರಾಹುಲ್‌ ಗಾಂಧಿ ಮಣಿಪುರಕ್ಕೆ ಹೋಗಬಹುದಾರೆ,ಪ್ರಧಾನಿ ಯಾಕೆ ಭೇಟಿ ನೀಡಬಾರದು ಎಂದು ಖರ್ಗೆ ಪ್ರಶ್ನೆ ಮಾಡಿದರು.ಮಣಿಪುರದಲ್ಲಿ ಮಹಿಳೆಯರಿಗೆ ಯಾವ ರಕ್ಷಣೆ ನೀಡಲಾಗಿದೆ?ಮಹಿಳೆಯರ ಮೇಲೆ ಅತ್ಯಾಚಾರ ಮಾಡಲಾಗುತ್ತಿದ್ದು ಅವರನ್ನು ಹತ್ಯೆ ಮಾಡಲಾಗುತ್ತಿದೆ.ಜನರು ತಮ್ಮ ಮನೆಗಳಿಂದ ಪಲಾಯನ ಮಾಡುತ್ತಿದ್ದಾರೆ ಅದರೂ ಬಿಜೆಪಿ ಮಾತ್ರ ವಿವಿಧ ರಾಜ್ಯಗಳಲ್ಲಿ ಚುನಾವಣೆ ಪ್ರಚಾರದಲ್ಲಿ ನಿರತವಾಗಿದೆ ಎಂದು ಖರ್ಗೆ ಆರೋಪಿಸಿದರು.

ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನವಾಗಿದ್ದರು.ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿದ ನಂತರವೇ ಅವರು ಸಂಸತ್ತಿನಲ್ಲಿ ಮನಿಪುರ ವಿಷಯದ ಬಗ್ಗೆ ಮಾತನಾಡಿದ್ದಾರೆ ಎಂದು ಖರ್ಗೆ ಪ್ರಧಾನಿಯನ್ನು  ಟೀಕಿಸಿದರು.

Donate Janashakthi Media

Leave a Reply

Your email address will not be published. Required fields are marked *