ಬೆಂಗಳೂರು: ಅಶ್ಲೀಲ ವಿಡೀಯೋಗಳ ಪೆನ್ಡ್ರೈವ್ ಗಳನ್ನು ಯಾರು ಹಂಚಿದ್ದಾರೆಂದು ಗೊತ್ತಿದೆ ಎಂದು ಸಚಿವ ಡಾ.ಜಿ.ಪರಮೇಶ್ವರ್ ಮಾರ್ಮಿಕ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣವು ತನಿಖೆಯ ಹಂತದಲ್ಲಿದೆ. ಹೀಗಾಗಿ ಮಾಹಿತಿಯನ್ನು ಸಾರ್ವಜನಿಕವಾಗಿ ಬಿಟ್ಟು ಕೊಡಲು ಆಗುವುದಿಲ್ಲ. ಎಸ್ಐಟಿ ತನಿಖೆಯು ಚುರುಕಾಗಿ ನಡೆಯುತ್ತಿದ್ದು, ತನಿಖೆ ಪೂರ್ಣವಾದ ಬಳಿಕ ಎಲ್ಲವೂ ಸಾರ್ವಜನಿಕವಾಗಿ ಗೊತ್ತಾಗಲಿದೆ ಎಂದರು.
ಇದನ್ನೂ ಓದಿ: ವಿಮಾನ ನಿಲ್ದಾಣದ ನಿರ್ದೇಶಕರಿಗೆ ಬಾಂಬ್ ಬೆದರಿಕೆ
ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಕುರಿತಾದ ಅತ್ಯಾಚಾರ, ಅಶ್ಲೀಲ ವಿಡಿಯೋ ಚಿತ್ರೀಕರಣ ಆರೋಪದ ಈ ಪ್ರಕರಣವು ಹೊರ ಬೀಳುತ್ತಿದ್ದಂತೆ, ಪ್ರಜ್ವಲ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ.
ತನಿಖೆಯ ಬಿಸಿ ಹೆಚ್ಚಾದಂತೆ ಒಂದು ತಿಂಗಳ ಬಳಿಕ ತಾನಾಗಿಯೇ ಎಸ್ಐಟಿಗೆ ಬಂದು ಶರಣಾಗುವುದಾಗಿ ವಿಡೀಯೋ ಮೂಲಕ ಹೇಳಿಕೆ ನೀಡಿದ್ದು ಗೊತ್ತೇ ಇದೆ ಎಂದರು.
ಇದನ್ನೂ ನೋಡಿ: ನಾಟಕ | ದೇವರ ಹೆಣ – ಕಥೆ : ಕುಂ. ವೀರಭದ್ರಪ್ಪ, ನಿರ್ದೇಶನ : ವಸಂತ ಗಂಗೇರ್ Janashakthi Media