73 ವರ್ಷದ ಮೋದಿ ನಿವೃತ್ತಿ ಹೊಂದುತ್ತಾರಾ: ಜಗದೀಶ್ ಶೆಟ್ಟರ್ ಹೈ ರೇಟೆಡ್‌ ಪ್ರಶ್ನೆ

ಹುಬ್ಬಳ್ಳಿ:- ಮೇ 12: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈಗ 73 ವರ್ಷ. ಅವರು ನಾಲ್ಕು ಬಾರಿ ಗುಜರಾತ್ ಮುಖ್ಯಮಂತ್ರಿಯಾಗಿದ್ದರು ಮತ್ತು ಎರಡನೇ ಅವಧಿಗೆ ಪ್ರಧಾನಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈಗ ಅವರು ರಾಜಕೀಯವನ್ನು ತ್ಯಜಿಸುವರೇ? ಎಂದು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕಾಂಗ್ರೆಸ್ ಅಭ್ಯರ್ಥಿ ಜಗದೀಶ ಶೆಟ್ಟರ್ ಪ್ರಶ್ನಿಸಿದ್ದಾರೆ.

ವಾಸ್ತವವಾಗಿ ಮೋದಿ ಅವರು ಇನ್ನೊಂದು ಅವಧಿಗೆ ಪ್ರಧಾನಿಯಾಗಿ ಮುಂದುವರಿಯಬೇಕೆಂದು ನಾನು ಬಯಸುತ್ತೇನೆ. ಅದೇ ರೀತಿ ನಾನು ಜನಬೆಂಬಲ ಇರುವವವರೆಗೂ ರಾಜಕೀಯದಲ್ಲಿ ಮುಂದುವರಿಯುತ್ತೇನೆ ಎಂದು ಹೇಳಿದರು.

ತಾವು ಪಕ್ಷ ಮತ್ತು ಸರ್ಕಾರದಲ್ಲಿ ಪ್ರಮುಖ ಹುದ್ದೆಗಳನ್ನು ಅನುಭವಿಸಿ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ ಎಂಬ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಆರೋಪದ ಕುರಿತು ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿ “ಪ್ರಹ್ಲಾದ್ ಜೋಶಿ ಅವರು ಸಂಸದರಾಗಿ ನಾಲ್ಕನೇ ಅವಧಿಯನ್ನು ಆನಂದಿಸುತ್ತಿದ್ದಾರೆ ಮತ್ತು ಕೇಂದ್ರ ಸಚಿವರಾಗಿದ್ದಾರೆ, ಅವರು ರಾಜಕೀಯದಿಂದ ನಿವೃತ್ತಿ ಹೊಂದುತ್ತಾರೆಯೇ?” ಅವರು ಕೇಳಿದರು.

ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಹಲವೆಡೆ ಬಿಜೀಪಿ ಮತದಾರರಿಗೆ ಹಣದ ಆಮಿಷ ಒಡ್ಡಲಾಗಿದೆ. ಚುನಾವಣೆಯಲ್ಲಿ ಸೋಲುವ ಭಯದಿಂದ ಬಿಜೆಪಿಯವರು ಮತದಾರರಿಗೆ ಹಣ ಹಂಚಿದ್ದಾರೆ. ಹಲವು ಸ್ಲಂಗಳಲ್ಲಿ ಪ್ರತಿ ವೋಟಿಗೆ 500 ರಿಂದ 1000 ರೂ.ವರೆಗೆ ಹಣ ನೀಡಿದ್ದಾರೆ ಎನ್ನಲಾಗಿದೆ. ನಾನು ಬಿಜೆಪಿಯಲ್ಲಿದ್ದಾಗ ಇಂತಹ ಚಟುವಟಿಕೆಗಳಿಗೆ ಕೈ ಹಾಕಿರಲಿಲ್ಲ, ಇಲ್ಲಿ ಗೆಲ್ಲುತ್ತಿದ್ದೆ. ಚುನಾವಣಾ ಅವ್ಯವಹಾರಗಳಲ್ಲಿ ಪಾಲ್ಗೊಳ್ಳದೆ ಚುನಾವಣೆ ನಡೆಸಬೇಕು ಎಂದು ಶೆಟ್ಟರ್ ಹೇಳಿದರು.

ಎಕ್ಸಿಟ್ ಪೋಲ್ ಸಮೀಕ್ಷೆಗಳು ನನ್ನ ಗೆಲುವಿನ ಮುನ್ಸೂಚನೆ ನೀಡಿವೆ. ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚಿಸಲಿದೆ. 2023ರಚುನಾವಣೆಯ ಫಲಿತಾಂಶವು 2024ರ ಲೋಕಸಭೆ ಚುನಾವಣೆ ಮತ್ತು ಇತರ ರಾಜ್ಯಗಳ ಚುನಾವಣೆಗಳ ಮೇಲೆ ಪ್ರಬಲ ಪ್ರಭಾವ ಬೀರಲಿದೆ ಎಂದು ಅವರು ಹೇಳಿದರು.

ವಿಧಾನಸಭೆ ಚುನಾವಣೆಗೂ ಮುನ್ನ ಲಿಂಗಾಯತ ಮುಖಂಡ ಜಗದೀಶ್ ಶೆಟ್ಟರ್ ಅವರು ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ಬಿಜೆಪಿಯಲ್ಲಿದ್ದಾಗ ಅವರು ಪ್ರತಿನಿಧಿಸುತ್ತಿದ್ದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಕ್ಷಣವೇ ಕಾಂಗ್ರೆಸ್‌ನಿಂದ ಟಿಕೆಟ್ ಪಡೆದರು.

ಮತದಾನ ದಿನವಾದ ಮೇ 10ರಂದು ಮತದಾನ ಹೊರ ಬಂದ ಬಿಜೆಪಿ ಸಂಸದೆ ಮಂಗಳ ಅಂಗಡಿ ಅವರು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹುಬ್ಬಳ್ಳಿ ಧಾರವಾಡ ಸೆಂಟ್ರಲ್‌ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರು ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದ್ದರು.

ಹುಬ್ಬಳ್ಳಿ ಧಾರವಾಡ ಸೆಂಟ್ರಲ್‌ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನಿರಾಕರಿಸಿದ್ದರಿಂದ ಜಗದೀಶ್‌ ಶೆಟ್ಟರ್‌ ಅವರು ಕಾಂಗ್ರೆಸ್‌ ಪಕ್ಷ ಸೇರಿ ಈಗ ಪಕ್ಷದ ಅಭ್ಯರ್ಥಿಯಾಗಿದ್ದಾರೆ. ಮಂಗಳ ಅಂಗಡಿ ಅವರು ದಿವಂಗತ ರೈಲ್ವೆ ಸಚಿವರಾಗಿದ್ದ ಸುರೇಶ್‌ ಅಂಗಡಿ ಅವರ ಪತ್ನಿಯಾಗಿದ್ದಾರೆ. ಸದ್ಯ ಬಿಜೆಪಿಯ ಸಂಸದೆಯಾಗಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *