ಭಾರತೀಯ ಸಂಸ್ಕೃತಿ ಉತ್ಸವ ಉದ್ಘಾಟನೆಯಲ್ಲಿ ಭಾಗವಹಿಸುವುದಿಲ್ಲ: ಸಿದ್ದರಾಮಯ್ಯ

ಕಲಬುರಗಿ: ಸಿಎಂ ಸಿದ್ದರಾಮಯ್ಯ ತಮ್ಮ X ಪೋಸ್ಟಿನಲ್ಲಿ “ಭಾರತ್ ವಿಕಾಸ್ ಸಂಗಮ್ ಸಂಸ್ಥೆಯವರು ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವ ಉದ್ಘಾಟನೆಯ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಮುದ್ರಣವಾಗಿದೆ. ಈ ಬಗ್ಗೆ ನನಗೆ ಅಧಿಕೃತ ಆಹ್ವಾನ ಬಂದಿಲ್ಲ” ಎಂದು ಟ್ವಿಟ್ ಮಾಡಿದ್ದಾರೆ. ಉದ್ಘಾಟನೆ

ಈ ಕಾರ್ಯಕ್ರಮವನ್ನು ಆಯೋಜಿಸಿರುವ ಸಂಸ್ಥೆಯ ಹಿನ್ನೆಲೆಯ ವಿವರವನ್ನು ಸಿಎಂ ತರಿಸಿಕೊಂಡು ಪರಿಶೀಲಿಸಿದ ನಂತರ, ಅದರಲ್ಲಿ ಭಾಗವಹಿಸದೇ ಇರಲು ತೀರ್ಮಾನಿಸಿದ್ದಾಗಿ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಪ್ರಜಾಪ್ರಭುತ್ವ ಭಾರತದಲ್ಲಿ ಒಂದು ಹೊತ್ತಿನ ಊಟಕ್ಕೆ ಪರದಾಡಬೇಕಿದೆ- ಶೈಲಜಾ ಟೀಚರ್ ಕಳವಳ‌

ಮುಂದಿನ ವರ್ಷ ಜ.29 ರಿಂದ ಫೆ.6ರವರೆಗೆ ಜಿಲ್ಲೆಯ ಸೇಡಂ ತಾಲೂಕಿನಲ್ಲಿ ಭಾರತೀಯ ಸಂಸ್ಕೃತಿ ಉತ್ಸವ ನಡೆಯಲಿದೆ. ಈ ಕಾರ್ಯಕ್ರಮ ಆಯೋಜಿಸಿರುವ ಭಾರತ್ ವಿಕಾಸ್ ಸಂಗಮ್ ಸಂಸ್ಥೆಯು ಆರ್‌ಎಸ್‌ಎಸ್‌ನ ಕೆ.ಎನ್.ಗೋವಿಂದಾಚಾರ್ಯ ಅವರೊಂದಿಗೆ ನಂಟು ಹೊಂದಿದೆ.

ಭಾರತೀಯ ಸಂಸ್ಕೃತಿ ಸಂರಕ್ಷಣೆಯ ನೆಪದಲ್ಲಿ ಹಿಂದುತ್ವ ಸಿದ್ಧಾಂತ ಪ್ರಚಾರ ನಡೆಸಲಾಗುತ್ತಿದೆ ಎಂಬ ಆರೋಪಗಳಿವೆ. ಹೀಗಾಗಿ ಈ ಉತ್ಸವಕ್ಕೆ ಸಿಎಂ ಹೋಗದಿರಲು ನಿರ್ಧರಿಸಿದ್ದಾರೆಂದು ಹೇಳಲಾಗುತ್ತಿದೆ.

ಇದನ್ನೂ ನೋಡಿ: ವಾಯುಭಾರ ಕುಸಿತ: ಕರ್ನಾಟಕದಲ್ಲಿ ಡಿಸೆಂಬರ್‌ನಲ್ಲಿ ಭರ್ಜರಿ ಮಳೆ ನಿರೀಕ್ಷೆ – IMD ಮುನ್ಸೂಚನೆ Janashakthi Media

Donate Janashakthi Media

Leave a Reply

Your email address will not be published. Required fields are marked *