ಬೆಂಗಳೂರು : ಸಿಎಂ ಯಡಿಯೂರಪ್ಪ ಬದಲಾವಣೆಯ ಬಿಸಿ ಬಿಸಿ ಚರ್ಚೆ ನಡೆಯುತ್ತಿರೋ ಸಂದರ್ಭದಲ್ಲಿ, ಸ್ವತಹ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೊಸ ಬಾಂಬ್ ಸಿಡಿಸಿದ್ದಾರೆ.
ಹೌದು.. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಬಿಜೆಪಿ ಹೈಕಮಾಂಡ್ ಸೂಚಿಸಿದ್ರೇ.. ರಾಜೀನಾಮೆ ನೀಡುತ್ತೇನೆ ಎನ್ನುವ ಮೂಲಕ, ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನವನ್ನೇ ಮೂಡಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಯಡಿಯೂರಪ್ಪ, ಬಿಜೆಪಿ ಹೈಕಮಾಂಡ್ ಗೆ ನನ್ನ ಮೇಲೆ ಎಲ್ಲಿಯವರೆಗೆ ವಿಶ್ವಾಸವಿರುತ್ತೋ ಅಲ್ಲಿಯವರೆಗೆ ಮುಖ್ಯಮಂತ್ರಿ ಪದವಿಯಲ್ಲಿ ಮುಂದುವರಿಯುತ್ತೇನೆ, ನನ್ನ ಶಕ್ತಿಮೀರಿ ಕೆಲಸ ಮಾಡುತ್ತೇನೆ, ಮುಂದೆಯೂ ರಾಜ್ಯದ ಜನತೆಯ ಒಳಿತಿಗಾಗಿ ಕೆಲಸ ಮಾಡುತ್ತೇನೆ, ಈ ವಿಷಯದಲ್ಲಿ ನನಗೆ ಯಾವುದೇ ಗೊಂದಲವಿಲ್ಲ ಎಂಬ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ.
ಇದನ್ನೂ ಓದಿ : ಹಂತ ಹಂತವಾಗಿ ಅನ್‌ಲಾಕ್ – ಪಾಸಿಟಿವಿಟಿ ರೇಟ್ ಕಡಿಮೆ ಇರುವ ಜಿಲ್ಲೆಗಳಿಗೆ ಮೊದಲ ಆದ್ಯತೆ
ಹೈಕಾಮಂಡ್ ಯಾವ ದಿನ ಯಡಿಯೂರಪ್ಪನವರೇ ಬೇಡ ಎಂದು ಹೇಳುತ್ತಾರೋ ಆಗ ಮುಖ್ಯಮಂತ್ರಿ ಪದವಿಯಿಂದ ಕೆಳಗಿಳಿಯುತ್ತೇನೆ, ರಾಜೀನಾಮೆ ನೀಡಿ ಜನತೆ ಪರ ಕೆಲಸ ಮಾಡುತ್ತೇನೆ, ನನ್ನ ಬದಲಿಗೆ ಪರ್ಯಾಯ ನಾಯಕತ್ವ ಇಲ್ಲ ಎಂಬ ಮಾತನ್ನು ನಾನು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.
ಯಡಿಯೂರಪ್ಪನವರ ಈ ಹೇಳಿಕೆ ಹಲವು ಅನುಮಾನಗಳನ್ನು ಸೃಷ್ಟಿಸಿದೆ. ಸದಾ ಕಠೋರದ ಮಾತುಗಳನ್ನು ಹೇಳುತ್ತಿದ್ದ ಸಿಎಂ ರವರ ಈ ಮೃದು ಧೋರಣೆ ಅಚ್ಚರಿ ಮೂಡಿಸಿದೆ. ನಮ್ಮವರೇ ಷಡ್ಯಂತರ ಮಾಡಿ ಅವರನ್ನು ಕೆಳಗಿಳಿಸುವಂತೆ ಮಾಡುತ್ತಿದ್ದಾರೆ ಎಂಬ ಮಾತುಗಳು ಯಡಿಯೂರಪ್ಪ ಆಪ್ತರಿಂದ ಕೇಳಿ ಬರುತ್ತಿವೆ. ಲಾಕ್ ಡೌನ್ ಇರುವವರೆಗೂ ಮಾತ್ರಿ ಯಡಿಯೂರಪ್ಪ ಸಿಎಂ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ನಿರಂತರ ಹೇಳಿಕೆ ಹಾಗೂ ಸಿಎಂ ಹೇಳಿಕೆ ಒಂದಕ್ಕೊಂದು ಅರ್ಥವನ್ನು ನೀಡುತ್ತಿವೆ. ಏನಾಗಬಹುದು ಕಾದ ನೋಡಬೇಕಷ್ಟೆ.