ಚಳಿಗಾಲದ ಅಧಿವೇಶನ: ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಆಸನ ವ್ಯವಸ್ಥೆ- ಬೆಳಗಾವಿ ಜಿಲ್ಲಾಡಳಿತ ಎಡವಟ್ಟು

ಬೆಳಗಾವಿ: ಚಳಿಗಾಲದ ಅಧಿವೇಶನವು ಇಂದಿನಿಂದ (ಡಿಸೆಂಬರ್ 9) ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಪ್ರಾರಂಭವಾಗಿದೆ. ಆದರೆ, ಅಧಿವೇಶದಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಆಸನ ವ್ಯವಸ್ಥೆ ಮಾಡುವ ಮೂಲಕ ಬೆಳಗಾವಿ ಜಿಲ್ಲಾಡಳಿತ ಎಡವಟ್ಟು ಮಾಡಿದೆ.

ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಚಳಿಗಾಲದ ಅಧಿವೇಶನದಲ್ಲಿ ಆಸನ ಮೀಸಲಿರಿಸಲಾಗಿದೆ. ಸದ್ಯ ಈ ವಿಚಾರ ಭಾರೀ ಚರ್ಚೆಯಾಗುತ್ತಿದೆ. ಈಚೆಗೆ ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆದಿತ್ತು. ಈ ಉಪ ಚುನಾವಣೆಯಲ್ಲಿ ಗೆದ್ದಿರುವ ನೂತನ ಶಾಸಕರಿಗೆ ಆಸನ ವ್ಯವಸ್ಥೆಯನ್ನು ಮಾಡಬೇಕಿತ್ತು. ಆದರೆ, ಈ ವಿಚಾರದಲ್ಲಿ ಎಡವಟ್ಟು ಆಗಿದೆ ಎನ್ನಲಾಗಿದೆ.

ಈಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಇಬ್ಬರು ಮಾಜಿ ಮುಖ್ಯಮಂತ್ರಿಗಳು ಸ್ಪರ್ಧೆ ಮಾಡಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಆದರೆ, ಸದ್ಯ ಸಂಸದರಾಗಿರುವ ಇಬ್ಬರು ಮಾಜಿ ಸಿಎಂಗಳಿಗೂ ಆಸನ ಮೀಸಲಿರಿಸಲಾಗಿದೆ.ಚಳಿಗಾಲದ ಅಧಿವೇಶನ,ಆಸನ ವ್ಯವಸ್ಥೆ,

ಸುವರ್ಣ ವಿಧಾನಸಭೆಯಲ್ಲಿ ಮಾಜಿ ಶಾಸಕರ ಹೆಸರಿನಲ್ಲಿ ಮೀಸಲಿದ್ದಾವ ಆಸನಗಳು. ಬೆಳಗಾವಿ ಜಿಲ್ಲಾಡಳಿತ ಈ ವಿಚಾರದಿಂದ ನಗೆಪಾಟಲಿಗೀಡಾಗಿದೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ಅವರ ಹೆಸರಲ್ಲಿ ಆಸನಗಳು ಮೀಸಲಿರಿಸಲಾಗಿದೆ.

ಇದನ್ನೂ ಓದಿ : ಮಂಡ್ಯ ಸಾಹಿತ್ಯ ಸಮ್ಮೇಳನ|ಮನೆಗೊಂದು ಕೋಳಿ ಸಂಗ್ರಹ ಅಭಿಯಾನ: ಬಾಡೂಟ ಬಳಗದ ಸಿದ್ಧತೆ

ಮೂವರು ಶಾಸಕ ಪ್ರಮಾಣ ವಚನ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಈಚೆಗೆ ಉಪ ಚುನಾವಣೆ ನಡೆದಿತ್ತು. ಈ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದ ಮೂರು ಜನ ಕಾಂಗ್ರೆಸ್‌ನ ಅಭ್ಯರ್ಥಿಗಳು ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಮೂರು ಜನ ಶಾಸಕರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಉಪಚುನಾವಣೆಯಲ್ಲಿ ಗೆದ್ದ ಮೂವರು ಶಾಸಕರಿಂದ ಇಂದು ಪ್ರಮಾಣ ವಚನ ತೆಗೆದುಕೊಳ್ಳಲಿದ್ದಾರೆ. ಶಿಗ್ಗಾಂವಿ ಶಾಸಕ ಯಾಸೀರ್‌ಖಾನ್ ಪಠಾಣ್, ಸಂಡೂರು ಶಾಸಕಿ ಅನ್ನಪೂರ್ಣ ತುಕಾರಾಂ ಹಾಗೂ ಚನ್ನಪಟ್ಟಣ ಶಾಸಕ

ಆದರೆ, ನೂತನ ಕಾಂಗ್ರೆಸ್ ಶಾಸಕರ ಹೆಸರನ್ನು ಸೇರ್ಪಡೆ ಮಾಡುವಲ್ಲಿ ಬೆಳಗಾವಿ ಜಿಲ್ಲಾಡಳಿತ ದಿವ್ಯ ನಿರ್ಲಕ್ಷ್ಯ ಮಾಡಿದೆ ಎನ್ನಲಾಗಿದೆ. ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಕಳೆದ ಒಂದು ತಿಂಗಳಿನಿಂದಲೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಆದರೆ, ಮಾಜಿ ಮುಖ್ಯಮಂತ್ರಿಗಳ ಹೆಸರು ತೆಗೆಯದೆ ಇರುವುದು ಹಾಗೂ ನೂತನ ಶಾಸಕರಿಗೆ ಆಸನ ಮೀಸಲು ಇರಿಸದೆ ಇರುವುದು ಇದೀಗ ಚರ್ಚೆಗೆ ಕಾರಣವಾಗಿದೆ.

ಈ ಬಾರಿಯ ಚಳಿಗಾಲದ ಅಧಿವೇಶನವು ಹಲವು ಕಾರಣಕ್ಕೆ ಪ್ರಾಮುಖ್ಯತ ಪಡೆದುಕೊಂಡಿದೆ. ರಾಜ್ಯ ಕಾಂಗ್ರೆಸ್‌ ಸರ್ಕಾರವು ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಗೆದ್ದ ಹುಮ್ಮಸ್ಸಿನಲ್ಲಿದೆ. ಆದರೆ, ಮತ್ತೆ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿದೆ.

ವಿವಿಧ ವಿಷಯಗಳ ಮೂಲಕ ರಾಜ್ಯ ಸರ್ಕಾರವನ್ನು ಕಟ್ಟಿ ಹಾಕುವುದಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮುಂದಾಗಿವೆ. ಆದರೆ, ವಿರೋಧ ಪಕ್ಷಗಳು ಆಡಳಿತ ಪಕ್ಷವನ್ನು ಕಟ್ಟಿ ಹಾಕುವುದಕ್ಕೆ ಬೇಕಾದ ಪೂರ್ವ ಸಭೆ ಅಥವಾ ಸಿದ್ಧತೆಗಳನ್ನೇ ಮಾಡಿಕೊಂಡಿಲ್ಲ ಎಂದೂ ವರದಿಯಾಗಿದೆ. ಇನ್ನು ಕೆಲವೇ ನಿಮಿಷಗಳಲ್ಲಿ ರಾಜ ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದ್ದು, ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ಆದ್ಯತೆ ಕೊಡಬೇಕು ಎನ್ನುವ ಆಗ್ರಹ ಇದೆ. ಯಾವೆಲ್ಲ ವಿಚಾರಗಳು ಚರ್ಚೆ ಆಗಲಿದೆ ಇಲ್ಲ ಗದ್ದಲದಲ್ಲೇ ಸಭೆ ನಡೆಯಲಿದೆಯೇ ಎನ್ನುವ ಪ್ರಶ್ನೆಗಳಿಗೆ ಕೆಲವೇ ಗಂಟೆಗಳಲ್ಲಿ ಉತ್ತರ ಸಿಗಲಿದೆ.

ಇದನ್ನೂ ನೋಡಿ: ಸಂವಿಧಾನ ಬದಲಿಸಿ, ನಮಗೆ ಬೇಕಾದ ಸಂವಿಧಾನ ಕೊಡಿ ಎಂದ ಪೇಜಾವರ ಮಠದ ಸ್ವಾಮಿ ವಿರುದ್ದ ಪ್ರಕರಣ ದಾಖಲಿಸಬೇಕಲ್ಲವೇ?

Donate Janashakthi Media

Leave a Reply

Your email address will not be published. Required fields are marked *