ಡಿಸೆಂಬರ್ 7 ರಿಂದ 29ರವರೆಗೆ ಸಂಸತ್ತಿನ ಚಳಿಗಾಲ ಅಧಿವೇಶನ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನವು ಡಿಸೆಂಬರ್ 7 ರಿಂದ 29 ರವರೆಗೆ ನಡೆಯಲಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಅಧಿವೇಶನದಲ್ಲಿ ಶಾಸಕಾಂಗ ವ್ಯವಹಾರ ಮತ್ತು ಇತರ ವಿಷಯಗಳ ಕುರಿತು ಚರ್ಚೆಗಳನ್ನು ನಿರೀಕ್ಷಿಸಲಾಗಿದೆ. ರಚನಾತ್ಮಕ ಚರ್ಚೆಗೆ ನಾವು ಸಿದ್ಧರಿದ್ದೇವೆ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಒಟ್ಟು 17 ದಿನಗಳು ಅಧಿವೇಶನ ನಡೆಯಲಿದ್ದು, ಈ ಸಮಯಲ್ಲಿ ಬೆಲೆ ಏರಿಕೆ, ಹಣದುಬ್ಬರ ನಿಯಂತ್ರಿಸುವಲ್ಲಿ ವಿಫಲವಾಗಿರುವುದು, ನಿರುದ್ಯೋಗ ಇತ್ಯಾದಿ ವಿಚಾರಗಳ ಬಗ್ಗೆ ಪ್ತತಿಪಕ್ಷಗಳು ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ವ್ಯಕ್ತಪಡಿಸುವ ಸಾಧ್ಯತೆ ಇದೆ.

ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು 1,500ಕ್ಕೂ ಹೆಚ್ಚು ಬಳಕೆಯಲ್ಲಿಲ್ಲದ ಮತ್ತು ಹಳೆ ಕಾನೂನುಗಳನ್ನು ರದ್ದುಗೊಳಿಸಲಿದೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.

ಸಮಾಜವಾದಿ ಪಕ್ಷದ ಹಿರಿಯ ನಾಯಕ ಮುಲಾಯಂ ಸಿಂಗ್ ಯಾದವ್ ಸೇರಿದಂತೆ ಕೆಲವು ಸಂಸದರು ನಿಧನ ಹೊಂದಿದ್ದು, ಅಧಿವೇಶನದ ಮೊದಲ ದಿನ ಸಂತಾಪ ಸೂಚಕ ಸಭೆ ನಡೆಯಲಿದ್ದು, ದಿನದ ಮಟ್ಟಿಗೆ ಕಲಾಪ ಮುಂದೂಡಿಕೆಯಾಗಲಿದೆ.

ಜಗದೀಪ್ ಧನ್​ಕರ್ ಉಪ ರಾಷ್ಟ್ರಪತಿಯಾದ ಬಳಿಕ ನಡೆಯುತ್ತಿರುವ ಮೊದಲ ಸಂಸತ್ ಅಧಿವೇಶನ ಇದಾಗಿದೆ. ಅವರು ಮೊದಲ ಬಾರಿಗೆ ರಾಜ್ಯಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

ದೇಶದಲ್ಲಿ ಕೋವಿಡ್ ಸಾಂಕ್ರಾಮಿಕದ ಸಂಖ್ಯೆ ದೇಶದಲ್ಲಿ ಕಡಿಮೆಯಾಗಿದೆ. ಲೋಕಸಭೆ ಮತ್ತು ರಾಜ್ಯಸಭೆಯ ಎಲ್ಲ ಸದಸ್ಯರಿಗೆ ಲಸಿಕೆ ಪಡೆದಿದ್ದಾರೆ. ಹಾಗಾಗಿ ಈ ಬಾರಿ ಸಂಸತ್ತಿನ ಚಳಿಗಾಲದ ಅಧಿವೇಶನವು ಯಾವುದೇ ಪ್ರಮುಖ ಕೋವಿಡ್ ಮಾರ್ಗಸೂಚಿಗಳ ಯಾವುದೇ ನಿರ್ಬಂಧಗಳಿಲ್ಲದೆ ನಡೆಯುವ ಸಾಧ್ಯತೆಯಿದೆ.

ಚಳಿಗಾಲದ ಅಧಿವೇಶನಕ್ಕಾಗಿ ಹಳೆಯ ಕಟ್ಟಡದಲ್ಲಿ ಈಗಾಗಲೇ ವ್ಯವಸ್ಥೆಗಳನ್ನು ಪ್ರಾರಂಭಿಸಲಾಗಿದ್ದು, 2023ರ ಕೇಂದ್ರ ಬಜೆಟ್ ಅಧಿವೇಶನವನ್ನು ಹೊಸ ಕಟ್ಟಡದಲ್ಲಿ ನಡೆಸಬಹುದು ಎಂದು ಹೇಳಲಾಗುತ್ತಿದೆ.

Donate Janashakthi Media

Leave a Reply

Your email address will not be published. Required fields are marked *