ಡಿಸೆಂಬರ್ 9 ರಿಂದ 20ರವರೆಗೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಮೊಹ್ಮದ್ ರೋಷನ್‌ ಮಾಹಿತಿ

ಬೆಳಗಾವಿ: ಕರ್ನಾಟಕದ ವಿಧಾನಮಂಡಲದ ಚಳಿಗಾಲದ ಅಧಿವೇಶನ ಡಿಸೆಂಬರ್‌ನಲ್ಲಿ ನಡೆಯಲಿದೆ ಎಂದು  ಬೆಳಗಾವಿ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್‌ ಮಾಯಿತಿ ನೀಡಿದ್ದಾರೆ.

ಡಿಸೆಂಬರ್ 9 ರಿಂದ 20ರವರೆಗೆ ಕರ್ನಾಟಕದ ವಿಧಾನಮಂಡಲದ ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿದ್ದು, ಈ ಅಧಿವೇಶನಕ್ಕೆ ಬೆಳಗಾವಿ ಜಿಲ್ಲಾಡಳಿತ ಸಕಲ ಸಿದ್ಧಾಂತೆಗಳನ್ನು ಮಾಡಿಕೊಂಡಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್‌ ತಿಳಿಸಿದರು.

ಇದನ್ನೂ ಓದಿ : ಗ್ಯಾರಂಟಿ ಯೋಜನೆ ಬಗ್ಗೆ ಸುಳ್ಳು ಜಾಹೀರಾತು ನೀಡಿದ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕೇಸ್ – ಡಾ. ಜಿ.ಪರಮೇಶ್ವರ್‌

ನಗರದಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು, ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿ ಜಿಲ್ಲಾಡಳಿತ ಸಕಲ ಸಿದ್ಧಾಂತೆಗಳನ್ನು ಮಾಡಿಕೊಂಡಿದೆ. ವಸತಿ, ಸಾರಿಗೆ, ಊಟ ಸೇರಿದಂತೆ ಅಧಿವೇಶನಕ್ಕೆ ಸಂಬಂಧಿಸಿದಂತೆ ಎಲ್ಲ ಸಕಲ ಸಿದ್ಧಾಂತೆಗಳನ್ನು ಜಿಲ್ಲಾಡಳಿತ ಮಾಡಿಕೊಂಡಿದೆ ಎಂದರು.

ಇನ್ನು ಮಹಾತ್ಮಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಎಐಸಿಸಿ ಅಧಿವೇಶನದ ಶತಮಾನೋತ್ಸವದ ಅಂಗವಾಗಿ ವರ್ಷಪೂರ್ತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೆಳಗಾವಿಯಲ್ಲಿ ಅಧಿವೇಶನ ನಡೆದ ಸ್ಥಳ ವೀರಸೌಧ ಮತ್ತು ಕಣಬರ್ಗಿಯಲ್ಲಿರುವ ಸ್ವತಂತ್ರಸೇನಾನಿ ಗಂಗಾಧರರಾವ್ ದೇಶಪಾಂಡೆ ಅವರ ಸ್ಮಾರಕವನ್ನು ಅಭಿವೃದ್ಧಿಪಡಿಸುವ ಕಾರ್ಯವನ್ನು ಮಾಡಲಾಗುತ್ತಿದೆ ಎಂದರು.

ಇದನ್ನೂ ನೋಡಿ : ಪ್ರತ್ಯೇಕ ‘ಆದಿವಾಸಿ ನಿಗಮ’ ಸ್ಥಾಪನೆಗೆ ಶೀಘ್ರವೇ ಕ್ರಮ : ಸಿಎಂ ಸಿದ್ದರಾಮಯ್ಯ Janashakthi Media

Donate Janashakthi Media

Leave a Reply

Your email address will not be published. Required fields are marked *