ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ಕೆಲಸಗಳ ಜೊತೆ ನಮ್ಮ ಸರ್ಕಾರ ನಿಲ್ಲಲಿದೆ| ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ಕೆಲಸಗಳ ಜೊತೆ ನಮ್ಮ ಸರ್ಕಾರ ನಿಲ್ಲಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಧ್ಯಮಗಳಿಗೆ ಪ್ರಕಟಣೆ ನೀಡಿರುವ  ಪತ್ರವನ್ನು ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ನಲ್ಲಿ ಪೋಸ್ಟ್‌  ಮಾಡಿದ್ದು, ರಾಜ್ಯ ಸರ್ಕಾರವು ಸಂವಿಧಾನದ ಮೂಲ ಆಶಯಗಳಡಿ ನಡೆಸುವ ಚಟುವಟಿಕೆಗಳನ್ನು ನಿಲ್ಲಿಸುವ ಅಥವಾ ತಡೆಯುವ ಯಾವುದೇ ಕೆಲಸ ಮಾಡುವುದಿಲ್ಲ. ಕಥೆ, ಕಾವ್ಯ, ನಾಟಕ, ಸಂಗೀತ ಮುಂತಾದ ಸೃಜನಶೀಲ ಅಭಿವ್ಯಕ್ತಿಗಳಿಗೆ ನಮ್ಮ ಬೆಂಬಲವಿರಲಿದೆ ಎಂದರು. ಸರ್ಕಾರ

ಇದನ್ನೂ ಓದಿ:ಸಾಂವಿಧಾನಿಕ ಹಕ್ಕುಗಳ ರಕ್ಷಣೆಗೆ ಕೋರಿ ಮುಖ್ಯಮಂತ್ರಿಗೆ ಬಹಿರಂಗ ಪತ್ರ

ಕೆಳಹಂತದ ಪೊಲೀಸ್ ಅಧಿಕಾರಿಗಳ ತಪ್ಪು ತಿಳುವಳಿಕೆಯ ಕಾರಣಕ್ಕಾಗಿ ಅನಾವಶ್ಯಕ ಗೊಂದಲ ನಿರ್ಮಾಣವಾಗಿರುವ ವಿಚಾರ ನನ್ನ ಗಮನಕ್ಕೆ ಬಂದಿದ್ದು, ಮುಂದೆ ಇಂತಹ ಗೊಂದಲಗಳಿಗೆ ಅವಕಾಶ ಮಾಡಿಕೊಡಬಾರದು ಎಂದು ಪೊಲೀಸ್ ಮಹಾನಿರ್ದೇಶಕರಿಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವ ಕೆಲಸಗಳ ಜೊತೆ ಸರ್ಕಾರವು ಸದಾ ನಿಲ್ಲುತ್ತದೆ ಎಂಬುದನ್ನು ತಿಳಿಸಬಯಸುತ್ತೇನೆ. ಆದ್ದರಿಂದ  ಯಾವುದೇ ರೀತಿಯ ಗೊಂದಲಗಳನ್ನು ಸೃಷ್ಟಿಸಬಾರದೆಂದು, ಅಭಿವ್ಯಕ್ತಿ ಸ್ವಾತಂತ್ರ್ಯದ ವಿಚಾರದಲ್ಲಿ ಆತಂಕಿತರಾಗಬಾರದೆಂದು ನಾಡಬಾಂಧವರಲ್ಲಿ ವಿನಂತಿಸಿದ್ದಾರೆ.ಎತ್ತಿಹಿಡಿಯುವ

ವಿಡಿಯೋ ನೋಡಿ: ಕಂಪನಿಗಳಿಂದ ಕಾರ್ಮಿಕರ ಶ್ರಮದ ಲೂಟಿ – ಮೀನಾಕ್ಷಿ ಸುಂದರಂ

Donate Janashakthi Media

Leave a Reply

Your email address will not be published. Required fields are marked *