ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಆರೋಪದ ಸಾಕ್ಷಿ ದೂರುದಾರನಿಗೆ ಜಾಮೀನು ನೀಡುವುದಕ್ಕೆ ಸಂಬಂಧಿಸಿದ ಆದೇಶವನ್ನು ಸೆಪ್ಟೆಂಬರ್. 16ರಂದು ಪ್ರಕಟಿಸುವುದಾಗಿ ನ್ಯಾಯಾಲಯ ತಿಳಿಸಿದೆ.
ಸಾಕ್ಷಿ ದೂರುದಾರನನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಆಗಸ್ಟ್.22ರಂದು ಬಂಧಿಸಿತ್ತು. ಬೆಳ್ತಂಗಡಿ, ಬೆಂಗಳೂರು ಮತ್ತಿತರ ಕಡೆಗಳಲ್ಲಿ ಮಹಜರು ನಡೆದಿತ್ತು. ಸೆ. 6ರಂದು ನ್ಯಾಯಾಂಗ ಬಂಧನ ವಿಧಿಸಿ ಬೆಳ್ತಂಗಡಿಯ ಜೆಎಂಎಫ್‌ಸಿ ನ್ಯಾಯಾಲಯ ಶಿವಮೊಗ್ಗ ಜೈಲಿಗೆ ಕಳುಹಿಸಿತ್ತು. ಧರ್ಮಸ್ಥಳ
ಇದನ್ನೂ ಓದಿ: ಪ್ರತಿಯೊಂದು ಹೋರಾಟದಲ್ಲೂ ಜೀವಂತರಾಗಿರುವ ಸೀತಾರಾಂ ಯೆಚುರಿ
ಆತನ ಜಾಮೀನು ಅರ್ಜಿ ಶುಕ್ರವಾರ ವಿಚಾರಣೆಗೆ ಬಂದಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶ ವಿಜಯೇಂದ್ರ ಟಿ. ಎಚ್ ಅವರು ಆದೇಶ ಕಾಯ್ದಿರಿಸಿದರು. ಜಾಮೀನು ನೀಡಬಾರದು ಎಂದು ಎಸ್‌ಐಟಿ ಪೊಲೀಸರು ವಕೀಲರ ಮೂಲಕ ಕೋರ್ಟ್‌ಗೆ ಆಕ್ಷೇಪಣೆ ಸಲ್ಲಿಸಿದ್ದಾರೆ. ಸಾಕ್ಷಿ ದೂರುದಾರನ ಪರವಾಗಿ ಕಾನೂನು ಸೇವಗಳ ಪ್ರಾಧಿಕಾರದ ವಕೀಲರು ವಾದ ಮಂಡಿಸಿದ್ದರು.
ವಿಠ್ಠಲ ಗೌಡ ಸಹಾಯಕನ ವಿಚಾರಣೆ
ಸಾಕ್ಷಿ ದೂರುದಾರ ಆರಂಭದಲ್ಲಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ ತಲೆಬುರುಡೆ
ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಸಂದೇಹದಿಂದ ವಿಚಾರಣೆಗೆ ಒಳಗಾಗಿದ್ದ ವಿಠ್ಠಲ ಗೌಡ ಅವರ ಆಪ್ತ ಎಂದು ಹೇಳಲಾದ ಬಂಟ್ವಾಳ ನಿವಾಸಿ ಪ್ರದೀಪ್ ಎಂಬುವರನ್ನು ಶುಕ್ರವಾರ ಎಸ್‌ಐಟಿ ವಿಚಾರಣೆಗೆ ಒಳಪಡಿಸಿದೆ.
ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಮಧ್ಯಾಹ್ನ 3 ಗಂಟೆಯ ವೇಳೆ ಪ್ರದೀಪ್ ಅವರನ್ನು ಹಾಜರುಪಡಿಸಿದ್ದು ನ್ಯಾಯಾಧೀಶರ ಮುಂದೆ ಸುಮಾರು ಎರಡು ತಾಸು ಹೇಳಿಕೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ನೋಡಿ: ನಿನ್ನ ಹೆರಿಗೆಗೆ ಆಸ್ಪತ್ರೆ ಮಾಡಿಸೋಣ …. ಏನ್ರೀ ದೇಶಪಾಂಡೆ ಇದು? ಅವಹೇಳನಕಾರಿ ಹೇಳಿಕೆಗೆ ಆಕ್ರೋಶJanashakthi Media
