ಬೆಂಗಳೂರು: ನಗರದಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡಗಳು ಸಂಭವಿಸುತ್ತಲೇ ಇರುತ್ತವೆ. ಇದೀಗ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಸೀಗೇಹಳ್ಳಿಯಲ್ಲಿ ನಿರ್ಮಾಣ ಹಂತದ 3 ಅಂತಸ್ತಿನ ಕಟ್ಟಡ ಹೊತ್ತಿ ಉರಿದಿದೆ. ಘಟನೆಯಲ್ಲಿ ಬಿಹಾರ ಮೂಲದ ಇಬ್ಬರು ಕಾರ್ಮಿಕರು ಸಜೀವ ದಹನವಾಗಿದ್ದಾರೆ.
ನಗರದ ಮಾಗಡಿ ರಸ್ತೆಯಲ್ಲಿರುವಂತಹ ಶಿವಾನಿ ಗ್ರೀನ್ಸ್ ಲೇಔಟ್ ನಲ್ಲಿ ಸತೀಶ್ ಎಂಬುವವರಿಗೆ ಸೇರಿದ ನಿರ್ಮಾಣ ಹಂತದ ಕಟ್ಟಡ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಈ ಒಂದು ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದ್ದು, ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ರೋಹಿಣಿ V/S ರೂಪಾ: ಒನ್ ಮಿನಿಟ್ ಅಪಾಲಜಿ ಪುಸ್ತಕ ಓದಲು ಕೋರ್ಟ್ ಸಲಹೆ
ಮಾಗಡಿ ರಸ್ತೆಯಲ್ಲಿರುವ ಸೀಗೇಹಳ್ಳಿಯಲ್ಲಿ ನಿರ್ಮಾಣ ಹಂತದ 3 ಅಂತಸ್ತಿನ ಕಟ್ಟಡ ಹೊತ್ತಿ ಉರಿದಿದೆ. ಶಿವಾನಿ ಗ್ರೀನ್ಸ್ ಲೇಔಟ್ ನಲ್ಲಿ ಸತೀಶ್ ಎಂಬುವವರಿಗೆ ಸೇರಿದ ನಿರ್ಮಾಣ ಹಂತದ ಕಟ್ಟಡ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರು
ಇದನ್ನೂ ನೋಡಿ: ವಿಮಾನ ನಿಲ್ದಾಣಕ್ಕೆ ಭೂಮಿ ಕಳೆದುಕೊಂಡ ಸಂತ್ರಸ್ತ ರೈತರಿಂದ ಪ್ರತಿಭಟನೆ Janashakthi Media