ಹನೂರು: ರಾಮಾಪುರ ಸಮೀಪದ ಕೆಂಪಯ್ಯನಹಟ್ಟಿ ಗ್ರಾಮದ ಪರಿಶಿಷ್ಟ ಜಾತಿಯ ಸಮುದಾಯಕ್ಕೆ ಸೇರಿದ್ದ ರಾಜಮ್ಮ, ದೊಡ್ಡಾಲತ್ತೂರು ಗ್ರಾಮದ ಸರ್ವೇ ನಂಬರ್ 80ರಲ್ಲಿ 20 ಸೆಂಟ್ ಜಾಗದಲ್ಲಿ ಸಾಗುವಳಿ ಮಾಡುತ್ತಿದ್ದರು. ಈಚೆಗೆ ಅಧಿಕಾರಿಗಳು ಅತಿಕ್ರಮಣ ತೆರವುಗೊಳಿಸಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಸಂಬಂಧ ನಾಮಫಲಕ ಹಾಕಿದ್ದರು. ಇದರಿಂದ ತೀವ್ರ ಮನನೊಂದು ರಾಜಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಹಾಗೂ ಗ್ರಾಮಸ್ಥರು ದೂರಿದ್ದಾರೆ.
ಶಾಸಕ ಎಂ ಆರ್ ಮಂಜುನಾಥ್ ಮೃತ ಮಹಿಳೆಯ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಒತ್ತುವರಿ ತೆರವಿಗೆ ಮನನೊಂದು ಮಹಿಳೆಯ ಸಾವು ಆಘಾತಕಾರಿಯಾಗಿದ್ದು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇನೆ ಎಂದು ಕುಟುಂಬಸ್ಥರ ಮನವೊಲಿಸಿ ಶವ ಸಂಸ್ಕಾರಕ್ಕೆ ಮನವಿ ಮಾಡಿದರು.
ಇದನ್ನೂ ಓದಿ: ಮನೆ-ನಿವೇಶನಕ್ಕಾಗಿ ವಸತಿ ರಹಿತರಿಗೆ ನಿವೇಶನಕ್ಕಾಗಿ ಆಗಸ್ಟ್ 20 ರಂದು ಪ್ರತಿಭಟನೆ ಕೆಪಿಆರ್ ಎಸ್
ತಹಶೀಲ್ದಾರ್ ಚೈತ್ರಾ ಭೇಟಿ ನೀಡಿ ಮೃತರ ಕುಟುಂಬಸ್ಥರ ಮನವೊಲಿಸಲು ಯತ್ನಿಸಿದಾಗ ಒಪ್ಪದ ಕುಟುಂಬಸ್ಥರು ಜಾಗ ನೀಡುವರೆಗೂ ಮೃತ ದೇಹ ತೆಗೆಯುವುದಿಲ್ಲ ಎಂದು ಪಟ್ಟುಹಿಡಿದರು. ರಾಮಾಪುರ ಠಾಣೆಯ ಇನ್‌ಸ್ಪೆಕ್ಟರ್ ಚಿಕ್ಕರಾಜುಶೆಟ್ಟಿ, ಪಿಎಸ್‌ಐ ಈಶ್ವರ್ ಹಾಗೂ ಸಿಬ್ಬಂದಿ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಿದ್ದರು.
ಹಲವು ವರ್ಷಗಳಿಂದ ಉಳುಮೆ ಮಾಡಿಕೊಂಡು ಬಂದಿರುವ ಜಮೀನನ್ನು ರಾಜಮ್ಮನವರ ಬಳಿಯಿಂದ ಕಿತ್ತುಕೊಂಡಿದ್ದು ಸರಿಯಲ್ಲ. ತೀರಾ ಬಡತನದಿಂದ ಬಳಲುತ್ತಿದ್ದ ರಾಜಮ್ಮನಿಗೆ ನಾಲ್ಕು ಹೆಣ್ಣು ಮಕ್ಕಳಿದ್ದು ಜೀವನ ನಡೆಸಲು ಕಷ್ಟವಾಗಿತ್ತು. ಒತ್ತುವರಿ ತೆರವಿನಿಂದ ಮನನೊಂದು ರಾಜಮ್ಮ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಗ್ರಾಮದ ಶಂಕರಪ್ಪ ಬೇಸರ ವ್ಯಕ್ತಪಡಿಸಿದರು.
ಇದನ್ನೂ ನೋಡಿ: ಚುನಾವಣಾ ಆಯೋಗ ಮತ್ತು ವಿಶ್ವಾಸಾರ್ಹತೆ ದೂರ ಬಲು ದೂರ… Janashakthi Media
