ಬೆಳಗಾವಿ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದ್ದು, ಕೆರೆಗೆ ಹಾರಿ ವಿವಾಹಿತ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅನಿಗೋಳ ಗ್ರಾಮದಲ್ಲಿ ನಡೆದಿದೆ.
ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವವರು ಗೌರವ್ವ ನೀಲಪ್ಪ ಕೆಂಗಾನೂರು (36) ಎಂಬುವವರು ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಕಳೆದ 5 ವರ್ಷಗಳಲ್ಲಿ ಎಸ್‌ಸಿ – ಎಸ್‌ಟಿ ಮೇಲಿನ ದೌರ್ಜನ್ಯಗಳು ಶೇ. 37.74 ರಷ್ಟು ಏರಿಕೆ!
ಗೌರವ್ವ ಮೈಕ್ರೋ ಫೈನಾನ್ಸ್ ನಲ್ಲಿ 7-10 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸುವಂತೆ ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.
ಜೀವನ ನಿರ್ವಹಣೆಗಾಗಿ ಗೌರವ್ವ ಸಾಲಮಾಡಿಕೊಂಡಿದ್ದರು. ಘಟನಾ ಸ್ಥಳದಲ್ಲಿ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಬೈಲ ಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ನೋಡಿ: ಲಾಲ್‌ಬಾಗ್ ಫ್ಲವರ್ ಶೋ| ಬಣ್ಣಬಣ್ಣದ ಹೂಗಳ ಚಿತ್ತಾರದಲ್ಲಿ ‘ತೇಜಸ್ವಿ ವಿಸ್ಮಯ’ Janashakthi Media
