ಚಿತ್ರದುರ್ಗ: ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು ಮಹಿಳೆಯೊಬ್ಬರು ಮೃತಪಟ್ಟು ಇನ್ನೂ ಅನೇಕರು ಅಸ್ವಸ್ಥಗೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದಿದ್ದಾರೆ.ತಪ್ಪಿತಸ್ಥರನ್ನು ಪತ್ತೆ ಮಾಡಿ ಶಿಸ್ತುಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರ ನೇತೃತ್ವದಲ್ಲಿ ತನಿಖಾ ತಂಡವೊಂದನ್ನು ಮುಖ್ಯಮಂತ್ರಿ ಸೂಚನೆಯ ಮೇರೆಗೆ ರಚಿಸಲಾಗಿದ್ದು.ಮೂರು ದಿನಗಳ ಒಳಗಾಗಿ ವರದಿ ನೀಡುವಂತೆ ಕಾಲಮಿತಿ ನಿಗದಿಪಡಿಸಲಾಗಿದೆ.
ಇದನ್ನೂ ಓದಿ:ಬೆಂಗಳೂರು–ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಮೊದಲ ದಿನ ₹68 ಸಾವಿರ ದಂಡ ವಸೂಲಿ:ಎಸ್ಪಿ ಕಾರ್ತಿಕ್ ರೆಡ್ಡಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘಟನೆಗೆ ಸಂಬಂಧಿಸಿದಂತೆ ಮಾಹಿತಿ ಕೇಳಿದ್ದರು.ಕವಾಡಿಗರಹಟ್ಟಿಯ ಪರಿಸ್ಥಿತಿಯನ್ನು ಸಂಪೂರ್ಣವಾಗಿ ವಿವರಿಸಲಾಗಿದೆ.ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ಮುಖ್ಯಮಂತ್ರಿ ಸೂಚನೆಯ ಮೇರೆಗೆ ತನಿಖಾ ತಂಡ ರಚನೆಯಾಗಿದೆ ಎಂದು ಜಿಲ್ಲಾಧಿಕಾರಿಗ ದಿವ್ಯ ಪ್ರಭು ಜಿ.ಆರ್.ಜೆ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದಾರೆ.
ಒಳಚರಂಡಿ ಮಂಡಳಿ ಗ್ರಾಮೀಣ ಕುಡಿಯುವ ನೀರು ಮತ್ತು ಕರ್ನಾಟಕ ನಗರ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ,ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಸೇರಿ ಅನೇಕರು ತನಿಖಾ ತಂಡದಲ್ಲಿದ್ದಾರೆ ಘಟನೆಯ ಕುರಿತು ವಿಶ್ಲೇಷಣೆ ಮಾಡಿ ತುರ್ತು ತನಿಖಾ ವರದಿಯನ್ನು ನೀಡಲಿದ್ದಾರೆ.ಇದರ ಆಧಾರದ ಮೇರೆಗೆ ತಪ್ಪಿತಸ್ಥರನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಿದೆ.
15 ದಿನಕ್ಕೊಮ್ಮೆ ನೀರಿನ ಶುದ್ಧತೆ ಖಚಿತಪಡಿಸಿಕೊಳ್ಳುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ನಗರ ವ್ಯಾಪ್ತಿಯ ಎಲ್ಲ ಓವರ್ ಹೆಡ್ ಟ್ಯಾಂಕ್ಗಳನ್ನು ಸ್ವಚ್ಛತೆ ಮಾಡುವಂತೆ ಆದೇಶ ಹೊರಡಿಸಿದ್ದಾರೆ.