ನಂಜನಗೂಡು: ಕೆಎಸ್‌ಆರ್‌ಟಿಸಿ ಸಾರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿರುವ ವೇಳೆ ಮಹಿಳೆಯೊಬ್ಬರು ತನ್ನ ತಲೆಯನ್ನು ಕಿಟಕಿಯಿಂದ ಹೊರಗೆ ಹಾಕಿದ್ದೂ, ಟಿಪ್ಪರ್ ಒಂದು ಓವರ್ ಟೇಕ್ ಮಾಡಿದ ವೇಳೆ ಮಹಿಳೆಯ ಕುತ್ತಿಗೆ ಮತ್ತು ಕೈ ತುಂಡಾಗಿ ಆಕೆ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಂಜನಗೂಡು ತಾಲೂಕಿನ ಸಿಂಧುವಳ್ಳಿ ಗ್ರಾಮದ ಬಳಿ ನಡೆದಿದೆ. ತಲೆ
ಮೃತರನ್ನು ಬೇಗೂರು ಸಮೀಪದ ಆಲಹಳ್ಳಿ ಗ್ರಾಮದ ಶಿವಲಿಂಗಮ್ಮ (43) ಎಂದು ಗುರುತಿಸಲಾಗಿದೆ. ಮೈಸೂರು-ಗುಂಡ್ಲುಪೇಟೆಗೆ ನಂಜನಗೂಡು ಮಾರ್ಗವಾಗಿ ತೆರಳುತ್ತಿದ್ದ ಸಾರಿಗೆ ಬಸ್ಸಿನಲ್ಲಿ ಮಹಿಳೆ ಶಿವಲಿಂಗಮ್ಮ ಪ್ರಯಾಣಿಸುತ್ತಿದ್ದರು.
ಇದನ್ನೂ ಓದಿ: ಮೈಕ್ರೋ ಫೈನಾನ್ಸ್ ಗಳ ಹಾವಳಿಗಳಿಂದಾಗಿ ರೈತರ ಆತ್ಮಹತ್ಯೆಗೆ ಸರ್ಕಾರವೇ ನೇರ ಹೊಣೆ : ಮುಖ್ಯಮಂತ್ರಿ ಚಂದ್ರು
ಸಿಂಧುವಳ್ಳಿ ಗ್ರಾಮದ ಬಳಿ ಬಸ್ಸಿನ ಕಿಟಕಿಯಿಂದ ಆಕೆ ಕತ್ತನ್ನು ಹೊರಹಾಕಿದ್ದ ಸಂದರ್ಭ ಬಾರಿ ಗೂಡ್ಸ್ ವಾಹನ ಮತ್ತು ಸಾರಿಗೆ ಬಸ್ ನಡುವೆ ಕ್ಷಣಾರ್ಧದಲ್ಲಿ ಅಪಘಾತವಾದ ಪರಿಣಾಮ ಬಸ್ಸಿನಲ್ಲಿ ಕುಳಿತಿದ್ದ ಶಿವಲಿಂಗಮ್ಮ ಎಂಬವರ ಕುತ್ತಿಗೆ ಮತ್ತು ಕೈ ತುಂಡಾಗಿ ಆಕೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ನೋಡಿ: ಗಣತಂತ್ರ ದಿನ : ವೆಂಟ್ರಿಲೋಕ್ವಿಸ್ಟ್ ಜಾನು ಆವಂತಿಕಾ ಮಾತುಕತೆ Janashakthi Media