ಯುವತಿಗೆ ಡ್ರಗ್ಸ್‌ ನೀಡಿ ಅತ್ಯಾಚಾರ, ಜಾತಿನಿಂದನೆ ಆರೋಪ; ಆಂಧ್ರದ ಯುವಕನ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಯುವಕ ಯುವತಿಯೊಬ್ಬಳಿಗೆ ಮಾದಕವಸ್ತು ನೀಡಿ ಮತ್ತು ಬರುವಂತೆ ಮಾಡಿ ಆಕೆಯ ಮೇಲೆ ಅತ್ಯಾಚಾರ ಎಸಗಿದಲ್ಲದೆ, ವಿಡಿಯೋ ಚಿತ್ರೀಕರಣ ಮಾಡಿ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿ, ಜಾತಿ ನಿಂದನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಈ ಸಂಬಂಧ ವಸಂತನಗರದ 26 ವರ್ಷದ ಯುವತಿ ನೀಡಿದ ದೂರಿನ ಮೇರೆಗೆ ಆಂಧ್ರಪ್ರದೇಶ ಮೂಲದ ಅಕ್ಕಿ ಲಕ್ಷ್ಮಿರೆಡ್ಡಿ ಎಂಬಾತನ ವಿರುದ್ಧ ಹೈಗ್ರೌಂಡ್ಸ್ ಠಾಣೆಯ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಜಾತಿ ನಿಂದನೆ ಪ್ರಕರಣವಾದರಿಂದ ಜೆ.ಸಿ.ನಗರ ಉಪವಿಭಾಗದ ಎಸಿಪಿ ನೇತೃತ್ವದಲ್ಲಿ ಹೆಚ್ಚಿನ ತನಿಖೆಗೆ ಪ್ರಕರಣ ವರ್ಗಾವಣೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದರು.

ಇದನ್ನೂ ಓದಿ : ಕೋಮುಭಾವನೆ ಕೆರಳಿಸುವ ಬರಹ ಬರೆದು ಫೇಸ್ಬುಕ್ ನಲ್ಲಿ ಪೋಸ್ಟ್‌ ಮಾಡಿದ ವ್ಯಕ್ತಿ ಬಂಧನ

ಪ್ರಕರಣದ ಹಿನ್ನೆಲೆ 

ಆಂಧ್ರ ಮೂಲದ ಲಕ್ಷ್ಮಿರೆಡ್ಡಿ ಎಂಬ ಯುವಕನ ಮೇಲೆ ಆರೋಪ ಕೇಳಿಬಂದಿದೆ. ಸದ್ಯ ಸಂತ್ರಸ್ತೆ ಎಂದು ಹೇಳಿಕೊಂಡಿರುವ ಯುವತಿ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದಾಳೆ. 2019ರಲ್ಲಿ ಯುವತಿ ಕಸ್ಟಮರ್ ಕೇರ್ ನಲ್ಲಿ ಕೆಲಸ ಮಾಡ್ತಿದ್ದರು. ಆರೋಪಿ ಲಕ್ಷ್ಮಿರೆಡ್ಡಿ ಕ್ರೆಡಿಟ್ ಕಾರ್ಡ್ ತೆಗೆದುಕೊಳ್ಳುವ ನೆಪದಲ್ಲಿ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದನು.

ಕೆಲವು ವರ್ಷಗಳ ನಂತರ ಅಕ್ಕನ ಬರ್ತ್‌ಡೇ ಇದೆ ಅಂತಾ ಖಾಸಗಿ ಹೋಟೆಲ್ ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕೃತ್ಯದ ವಿಡಿಯೋ ಮಾಡಿ ಯುವತಿಗೆ ಬೆದರಿಕೆ ಹಾಕಿದ್ದಾನೆ. ವಿಡಿಯೋ ತೋರಿಸಿ ಹಲವು ಬಾರಿ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ.

ಜಾತಿ ನಿಂದನೆ: ಆರೋಪಿ, ತನ್ನ ತಾಯಿ ಹಾಗೂ ತನ್ನ ಜಾತಿ ಬಗ್ಗೆ ಕೀಳು ಭಾಷೆಯಲ್ಲಿ ನಿಂದಿಸಿದ್ದಾನೆ. ನಮ್ಮ ಮನೆಯಲ್ಲಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇ ಡ್ಕರ್ ಫೋಟೋ ತೆಗೆದುಹಾಕುವಂತೆ ಒತ್ತಾಯಿಸಿ ದ್ದಾನೆ.

ಆ ನಂತರದ ದಿನಗಳಲ್ಲಿ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ನಡೆದ ವಿಚಾರವನ್ನು ತನ್ನ ತಾಯಿ ಬಳಿ ಹೇಳಿಕೊಂಡಿದ್ದ ಈ ಮಧ್ಯೆ ನ.30ರಂದು ನನ್ನನ್ನು ಭೇಟಿಯಾಗಿದ್ದ ಆರೋಪಿ, ನನ್ನ ಮೊಬೈಲ್ ವಾಲ್‌ಪೇಪರ್‌ನಲ್ಲಿದ್ದ ಅಂಬೇಡ್ಕರ್ ಫೋಟೋ ತೆಗೆದುಹಾಕುವಂತೆ ಬೆದರಿಸಿ ಮೊಬೈಲ್ ಒಡೆದು ಹಾಕಿದ್ದಾನೆ. ಅಲ್ಲದೆ, ಸಾರ್ವಜನಿಕ ಸ್ಥಳದಲ್ಲಿ ನನ್ನ ಬಟ್ಟೆ ಹರಿದುಹಾಕಿ ದೌರ್ಜನ್ಯ ಎಸಗಿದ್ದಾನೆ ಎಂದು ಯುವತಿ ಆರೋಪ ಮಾಡಿದ್ದಾಳೆ ಸದ ಆರೋಪಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾನೆ. ಘಟನೆ ಸಂಬಂಧ ಜೆ.ಸಿ.ನಗರ ಪೊಲೀಸ್ ಠಾಣೆ ಎಸಿಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ : ಸೇಡಂ ಸನಾತನಿ ಉತ್ಸವ : ಸಂವಿಧಾನ ವಿರೋಧ ಉತ್ಸವ – ಚಿಂತಕರ ಅಭಿಮತ Janashakthi Media

Donate Janashakthi Media

Leave a Reply

Your email address will not be published. Required fields are marked *