ಮನೆ ಕೇಳಲು ಬಂದ ಮಹಿಳೆಗೆ ಗ್ರಾಮ ಪಂಚಾಯಿತಿ ಸದಸ್ಯನಿಂದ ಲೈಂಗಿಕ ಕಿರುಕುಳ

Please follow and like us:
ಕಲಬುರಗಿ: ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮರಗುತ್ತಿ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯ ಓರ್ವ ಸರ್ಕಾರದ ವತಿಯಿಂದ ನೀಡಲಾಗುವ ಮನೆ ಕೇಳಲುಬಂದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ  ನಡೆದಿದೆ.

ಪಂಚಾಯತಿ ಮನೆ ಮಾಡಿಸಿಕೊಡುತ್ತೇನೆ ನನ್ನ ಜೊತೆ ಮಲಕೋ. ನೀನು ಬರಲಿಲ್ಲ ಅಂದ್ರೆ ನಿನ್ನ ಮಗಳನ್ನಾದರೂ ಕಳಿಸು ಎಂದಿದ್ದಾನೆ. ಈ ಸಂಬಂಧ ಮಹಿಳೆ, ನೀಲಕಂಠ ರಾಠೋಡ್ ವಿರುದ್ಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

ಇದನ್ನೂ ಓದಿ: ಸಾಮ್ರಾಜ್ಯಶಾಹಿಯ ಮರು ಪ್ರಾಬಲ್ಯಹೇರಿಕೆಗೆ ಟ್ರಂಪ್ ರಣತಂತ್ರ

ಮಳಸಾಪುರ ಗ್ರಾಮದ ಮಹಿಳೆ ಮನೆ ಮಾಡಿಸಿಕೊಡಿ ಎಂದು ಗ್ರಾಮ ಪಂಚಾಯಿತಿ ಸದಸ್ಯ ನೀಲಕಂಠಗೆ ಮನವಿ ಮಾಡಿದ್ದಾಳೆ. ಆಗ ನೀಲಕಂಠ, ಪಂಚಾಯತಿಯಿಂದ ಮನೆ ಮಾಡಿಸಿಕೊಡಲು ದುಡ್ಡಿಗೆ ಬೇಡಿಕೆ ಇಟ್ಟಿದ್ದಾನೆ. ದುಡ್ಡು ಕೊಡಲು ಆಗದಿದ್ದರೆ ನನ್ನ ಜೊತೆ ಮಲಕೋ ಎಂದು ಒತ್ತಾಯ ಮಾಡಿದ್ದಾನೆ. ಅಲ್ಲದೇ ನೀನು ಬರಲಿಲ್ಲ ಅಂದ್ರೆ ನಿನ್ನ ಮಗಳನ್ನ ಕಳುಹಿಸು ಎಂದು ಹೇಳುತ್ತಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

ಇದರಿಂದ ಆಕ್ರೋಶಗೊಂಡ ಮಹಿಳೆ, ಮಳಸಾಪುರ ಗ್ರಾಮದಿಂದ ಮರಗುತ್ತಿ ಪಂಚಾಯತಿಗೆ ಆಯ್ಕೆಯಾಗಿರುವ ನೀಲಕಂಠನ ವಿರುದ್ಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ದೂರಿನ ಮೇರೆಗ ಪೊಲೀಸರು ಬಿಎನ್​ಎಸ್ ಕಾಯ್ದೆ 75, 78,79 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಇದನ್ನೂ ನೋಡಿ: Karnataka Legislative Assembly Live Day 08 | ವಿಧಾನಸಭೆ ಬಜೆಟ್ ಅಧಿವೇಶನದ ನೇರ ಪ್ರಸಾರ

Please follow and like us:
Donate Janashakthi Media

Leave a Reply

Your email address will not be published. Required fields are marked *