ಹೊಸ ನೀತಿ ಆಯ್ಕೆ ಮಾಡಿಕೊಳ್ಳಲು ಒತ್ತಡ ಹೇರುವುದಿಲ್ಲ: ದೆಹಲಿ ಹೈಕೋರ್ಟ್‌ಗೆ ವಾಟ್ಸ್‌ಆ್ಯಪ್

ನವದೆಹಲಿ: ದತ್ತಾಂಶ ರಕ್ಷಣೆ ಮಸೂದೆ ಜಾರಿಯಾಗುವವರೆಗೂ ಹೊಸ ಖಾಸಗಿ ನೀತಿಯನ್ನು ಆಯ್ಕೆ ಮಾಡಿಕೊಳ್ಳುವಂತೆ ಬಳಕೆದಾರರ ಮೇಲೆ ಒತ್ತಡ ಹೇರುವುದಿಲ್ಲ ಎಂದು ವಾಟ್ಸ್‌ ಆ್ಯಪ್‌ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

ಕೇಂದ್ರ ಸರ್ಕಾರ ಗೋಪ್ಯತಾ ನೀತಿಯನ್ನು ರದ್ದುಪಡಿಸಲು ಕೇಳಿದೆ. ಅದರೆ, ನಾವು ಮಾಹಿತಿ ರಕ್ಷಣಾ ಮಸೂದೆ ಜಾರಿಗೆ ಬರುವವರೆಗೆ ಹೊಸ ನೀತಿಯನ್ನು ಜಾರಿ ಮಾಡುವುದಿಲ್ಲವೆಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ.

ಇದನ್ನು ಓದಿ: ಗುಂಪಿನ ಸದಸ್ಯ ಮಾಡಿದ ಪೋಸ್ಟ್‌ಗೆ ವಾಟ್ಸಾಪ್ ಗುಂಪಿನ ನಿರ್ವಾಹಕನನ್ನು ಹೊಣೆಗಾರರನ್ನಾಗಿ ಮಾಡಲಾಗದು: ಬಾಂಬೆ ಹೈಕೋರ್ಟ್

ಅರ್ಜಿಯನ್ನು ವಿಚಾರಣೆಯನ್ನು ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ಎನ್.ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರಿದ್ದ ಪೀಠದ ಮುಂದೆ ಫೇಸ್‌ಬುಕ್ ಒಡೆತನದ ವಾಟ್ಸಾಪ್ ಇಂದು ತನ್ನ ನಿಲುವನ್ನು ವಿವರಣೆಯನ್ನು ನೀಡಿದೆ.

ವಾಟ್ಸಾಪ್ ಪರವಾಗಿ ಹಿರಿಯ ವಕೀಲ ಹರೀಶ್ ಸಾಳ್ವೆ ಅವರು ನ್ಯಾಯಾಲಯಕ್ಕೆ ಹೊಸ ಗೌಪ್ಯತಾ ನೀತಿಯ ಬಗ್ಗೆ ಒಪ್ಪಿಕೊಳ್ಳುವಂತೆ ನಾವು ಒತ್ತಾಯಿಸುವುದಿಲ್ಲ. ಆದಾಗ್ಯೂ ವಾಟ್ಸಾಪ್ ತನ್ನ ಬಳಕೆದಾರರಿಗೆ ನವೀಕರಣ (ಅಪ್ಡೇಟ್) ವನ್ನು ಪ್ರದರ್ಶಿಸುವುದನ್ನು ಮುಂದುವರಿಸುತ್ತದೆ ಎಂದು ಹೇಳಿದ್ದಾರೆ.

ವಾಟ್ಸಾಪ್‌ನ ಹೊಸ ಗೌಪ್ಯತೆ ನೀತಿಯ ಬಗ್ಗೆ ತನಿಖೆ ನಡೆಸುವಂತೆ ಭಾರತದ ಸ್ಪರ್ಧಾ ಆಯೋಗ ಸಿಸಿಐ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಫೇಸ್‌ಬುಕ್ ಮತ್ತು ವಾಟ್ಸಾಪ್ ದೆಹಲಿ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿತ್ತು.

ಇದನ್ನು ಓದಿ: ಬಿಜೆಪಿಯಿಂದ ಆಧಾರ್‌ ಮಾಹಿತಿ ಸೋರಿಕೆ: ತನಿಖೆಗೆ ಹೈಕೋರ್ಟ್‌ ಮಹತ್ವದ ಆದೇಶ

ವಾಟ್ಸಪ್‌ ಗೋಪ್ಯತಾ ನೀತಿಯು ಮಾಹಿತಿ ತಂತ್ರಜ್ಞಾನ (ಭದ್ರತಾ ಅಭ್ಯಾಸಗಳು ಮತ್ತು ಪ್ರಕ್ರಿಯೆಗಳು ಹಾಗೂ ಸೂಕ್ಷ್ಮ ವೈಯಕ್ತಿಕ ಮಾಹಿತಿ ಅಥವಾ ದತ್ತಾಂಶ) ನಿಯಮಗಳು – 2011ರ ಉಲ್ಲಂಘನೆಯಾಗಿದೆ ಎಂದು ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ವಾಟ್ಸಪ್‌ಗೆ ನೋಟಿಸ್ ನೀಡಿತ್ತು.

ನ್ಯಾಯಾಲಯವು ವಿಚಾರಣೆಯ ಸಂದರ್ಭದಲ್ಲಿ  ವಾಟ್ಸಾಪ್‌ ಯೂರೋಪ್‌ ಹಾಗೂ ಭಾರತಕ್ಕೆ ಪ್ರತ್ಯೇಕವಾಗಿರುವ ನೀತಿಗಳನ್ನು ರೂಪಿಸಿದಿಯೇ ಎಂದು ಪ್ರಶ್ನಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ಹರೀಶ್ ಸಾಳ್ವೆ ಅವರು ಸಂಸತ್ತಿನ ಕಾಯಿದೆ ಬರುವವರೆಗೆ ನಾವು ಏನನ್ನೂ ಮಾಡಲು ಮುಂದಾಗುವುದಿಲ್ಲ. ಇದು ನಮ್ಮ ವಚನವಾಗಿದೆ. ಸಂಸತ್ತು ಒಂದೊಮ್ಮೆ ಭಾರತಕ್ಕೆ ಪ್ರತ್ಯೇಕ ನೀತಿಯನ್ನು ಹೊಂದಲು ನಮಗೆ ಅನುವು ಮಾಡಿದರೆ ನಾವು ಹೊಂದುತ್ತೇನೆ. ಇಲ್ಲವಾದರೆ, ನಂತರ ನಿರ್ಧರಿಸುತ್ತೇವೆ ಎಂದು ತಿಳಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *