ಆನೇಕಲ್‌| ನೀರಿನ ಸಂಪ್ ಸ್ವಚ್ಛಗೊಳಿಸಲು ಇಳಿದು ಇಬ್ಬರ ಕಾರ್ಮಿಕರ ಮೃತ್ಯು

ಆನೇಕಲ್‌: ನೀರಿನ ಸಂಪ್ ಸ್ವಚ್ಛತೆಗಿಳಿದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ದಾರುಣವಾಗಿ ಮೃತಪಟ್ಟಿರುವ  ಘಟನೆ ಬುಧವಾರ ಸಂಜೆ ಶಿಕಾರಿಪಾಳ್ಯದ ವಾಜಪೇಯಿ ಸರ್ಕಲ್ ಬಳಿಯ ಕಾರ್ಖಾನೆಯಲ್ಲಿ ನಡೆದಿದೆ. ಆನೇಕಲ್‌

ಬಿಹಾರ ಮೂಲದ ಚಂದನ್‌ ರಾಜವಂಶಿ (29) ಮತ್ತು ಪಿಂಟು ರಾಜವಂಶಿ (21) ಮೃತರು. ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿ ಪೊಲೀಸ್‌ ಠಾಣೆ ವ್ಯಾಪ್ತಿಯ ತಿರುಪಾಳ್ಯದಲ್ಲಿ  ಸಂಜೆ ನೀರಿನ ಸಂಪ್‌ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಅಸ್ವಸ್ಥಗೊಂಡಿರುವ ಮತ್ತಿಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಇದನ್ನೂ ಓದಿ: ಪೊಲೀಸರ ವಾಹನವನ್ನೇ ಓಡಿಸಿಕೊಂಡು ಪರಾರಿಯಾದ ಆರೋಪಿ!

ತಿರುಪಾಳ್ಯದ ಶ್ರೀನಿವಾಸರೆಡ್ಡಿ ಎಂಬುವರಿಗೆ ಸೇರಿದ ಸನ್‌ಶೈನ್‌ ಹೋಲ್ಡಿಂಗ್‌ ಕಂಪನಿಯ ನೀರಿನ ಸಂಪ್‌ ಸ್ವಚ್ಛಗೊಳಿಸಲು ಇಬ್ಬರು ಕಾರ್ಮಿಕರ‌ನ್ನು ಸಂಪ್‌ಗೆ ಇಳಿಸಲಾಗಿತ್ತು. ಈ ವೇಳೆ ಅವರಿಬ್ಬರು ಅಸ್ವಸ್ಥಗೊಂಡರೆನ್ನಲಾಗಿದೆ. ಇಂದನ್ನು ಕಂಪನಿ ಮಾಲಕ ಶ್ರೀನಿವಾಸರೆಡ್ಡೆ ಮತ್ತು ಇನ್ನೊಬ್ಬ ಕಾರ್ಮಿಕ ಜಗದೀಶ್‌ ಎಂಬವರು ಕೂಡಾ ಸಂಪ್‌ಗೆ ಇಳಿದಿದ್ದು,‌ ಕೂಡ ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಸ್ಥಳದಲ್ಲಿದ್ದ ಉಳಿದ ಕಾರ್ಮಿಕರು ಈ ಇಬ್ಬರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಹೆಬ್ಬಗೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಪೊಲೀಸ್‌ ವರಿಷ್ಠಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿಡಿಯೋ ನೋಡಿ: ರಾಜ್ಯದಲ್ಲಿ ಸರ್ಕಾರ ಬದಲಾಗಿದೆ, ನಿಲುವುಗಳಲ್ಲಿ ಬದಲಾವಣೆ ಇಲ್ಲ – ಬಿ.ಸುರೇಶ್‌ Janashakthi Media

Donate Janashakthi Media

Leave a Reply

Your email address will not be published. Required fields are marked *