ಮೈಸೂರು:ಚರ್ಮ ಮತ್ತು ಲೈಂಗಿಕ ರೋಗ ತಜ್ಞರಾಗಿ ಹತ್ತಾರು ವರ್ಷಗಳಿಂದ ನಿರಂತರವಾಗಿ ಬಡ ಜನರಿಗಾಗಿ ಸೇವೆ ಸಲ್ಲಿಸುತಿದ್ದ ಡಾ.ಎಸ್.ಸಿ ಶಂಕರೇಗೌಡ ಹೃದಯಘಾತದಿಂದ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಡಾ.ಎಸ್ .ಸಿ ಶಂಕರೇಗೌಡ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಕೂಡಲೇ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೃದಯದ ಮೂರು ರಕ್ತನಾಳಗಳು ಬ್ಲಾಕ್ ಆಗಿದ್ದರಿಂದ ಸದ್ಯ ತಾತ್ಕಾಲಿಕವಾಗಿ ಸ್ಟಂಟ್ ಅಳವಡಿಸಲಾಗಿದೆ. ಆದರೆ ಒಂದು ವಾರದ ಬಳಿಕ ಬೈಪಾಸ್ ಸರ್ಜರಿ ಮಾಡುವ ಸಾಧ್ಯತೆ ಇದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಶಂಕರೇಗೌಡರು ಪ್ರಾಣಪಾಯದಿಂದ ಪಾರಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.
5 ರೂಪಾಯಿ ಡಾಕ್ಟರ್ ಎಂದೇ ಚಿರಪರಿಚಿತರಾಗಿದ್ದ ಇವರು ಸ್ವಗ್ರಾಮ ಶಿವಳ್ಳಿಯಲ್ಲಿ ಉಚಿತವಾಗಿ ರೋಗಿಗಳನ್ನು ಪರೀಕ್ಷೆ ಮಾಡುತ್ತಿದ್ದರು.ಮಂಡ್ಯದಲ್ಲಿರು ತಮ್ಮ ಕ್ಲೀನಿಕ್‍ನಲ್ಲಿ ಮಾತ್ರ ಪ್ರತಿಯೊಬ್ಬರಿಗೆ 5 ರೂಪಾಯಿ ಚಿಕಿತ್ಸೆಗೆ ಹಣ ಪಡೆಯುತ್ತಿದ್ದರು.