ಯಾದಗಿರಿ ಮಹಿಳೆಯ ಮೇಲಿನ‌ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ಬೆಂಗಳೂರು : ಯಾದಗಿರಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ದೌರ್ಜನ್ಯಗಳು. ಮಹಿಳೆಯನ್ನು ಬೆತ್ತಲೆಗೊಳಿಸಿ ಥಳಿಸಿದ ಅಮಾನವೀಯ ಪ್ರಕರಣವನ್ನು ಖಂಡಿಸಿ ಮೈಸೂರು ಬ್ಯಾಂಕ್ ವೃತ್ತದ ಬಳಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಉದ್ದೇಶಿಸಿ ಸಂಘಟನೆಯ ರಾಜ್ಯಾಧ್ಯಕ್ಷೆ ದೇವಿ ಮಾತನಾಡುತ್ತಾ,  ಈ ಘಟನೆ ಬೆಚ್ಚಿ ಬೀಳಿಸುವಂತಹದ್ದು. ಅಪರಾಧಿ ಸಮಾಜ ನಿರ್ಮಾಣದಲ್ಲಿ ಅಧಿಕಾರಸ್ಥರ, ಪಟ್ಟಭದ್ರರ ಹೇಯ ಪಾತ್ರವನ್ನು ನಾವು ಖಂಡಿಸುತ್ತೇವೆ. ನಾಗರೀಕ ಮನಸುಗಳು ಎಚ್ಚೆತ್ತುಕೊಳ್ಳದಿದ್ದರೆ ಕ್ರೌರ್ಯದ ಕೃತ್ಯಗಳು ಹೆಚ್ಚುತ್ತಲೇ ಹೋಗುತ್ತವೆ ಎಂದು ಅಭಿಪ್ರಾಯ ಪಟ್ಟರು.

ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಗೌರಮ್ಮ ಮಾತನಾಡಿ, ಯಾದಗಿರಿ ಜಿಲ್ಲೆಯ ಆಡಳಿತ ಯಂತ್ರ ಏನು ಮಾಡುತ್ತಿದೆ? ಚುನಾಯಿತ ಮಂದಿ ಎಲ್ಲಿದ್ದಾರೆ? ಎಂದು ಪ್ರಶ್ನಿಸಿದರು. ಮಹಿಳೆಯನ್ನು ಬೆತ್ತಲೆಗೊಳಿಸಿ ಬಾರ್ಬರಿಕ ಲೈಂಗಿಕ ದೌರ್ಜನ್ಯ ಎಸಗಿದವರನ್ನು ಶಿಕ್ಷಿಸಲು ಹಾಗೂ ಮಹಿಳಾ ಸಾಗಾಣಿಕೆಯ ದಂಧೆಯಲ್ಲಿ ತೊಡಗಿದ್ದನ್ನು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಈ ಪ್ರತಿಭಟನೆಯಲ್ಲಿ ರಾಜ್ಯ ಉಪಾಧ್ಯಕ್ಷ ರಾದ ಕೆ.ನೀಲಾ. ಡಾ. ಮೀನಾಕ್ಷಿ ಬಾಳಿ.ಕೆ.ಎಸ್.ಲಕ್ಷ್ಮಿ. ಲಲಿತಶೆಣೈ  ಸೇರಿದಂತೆ ಅನೇಕರು ಭಾಗವಹಿಸಿದ್ದರು.

Donate Janashakthi Media

Leave a Reply

Your email address will not be published. Required fields are marked *