ಯಾದಗಿರಿ ಪಿಎಸ್​ಐ ಅನುಮಾನಸ್ಪದ ಸಾವು: ಕಾಂಗ್ರೆಸ್​ ಶಾಸಕನ ವಿರುದ್ಧ ದೂರು

ಯಾದಗಿರಿ: ಯಾದಗಿರಿ ಸೈಬರ್ ಕ್ರೈಮ್ ಠಾಣೆಯ ಪಿಎಸ್ಐ ಪರಶುರಾಮ (34) ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ. ಪಿಎಸ್​ಐ ಪರಶುರಾಮ ಅವರ ಸಾವಿಗೆ ಕಾಂಗ್ರೆಸ್​ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಮತ್ತು ಪುತ್ರ ಪಂಪಣ್ಣಗೌಡ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.

ಯಾದಗಿರಿ ನಗರ ಠಾಣೆಗೆ ಪೋಸ್ಟಿಂಗ್​​ಗಾಗಿ ಕಾಂಗ್ರೆಸ್​ ಶಾಸಕ ಚೆನ್ನಾರೆಡ್ಡಿ ಪಾಟೀಲ್ 30 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹೀಗಾಗಿ ಪರಶುರಾಮ 30 ಲಕ್ಷ ರೂ. ನೀಡಿ, ಯಾದಗಿರಿ ನಗರಕ್ಕೆ ವರ್ಗಾವಣೆಯಾಗಿದ್ದರು. ಆದರೆ, ಒಂದು ವರ್ಷದ ಪೂರೈಸುವ ಮುನ್ನವೇ ಪರಶುರಾಮ್​ ಅವರನ್ನು ಮತ್ತೆ ಯಾದಗಿರಿ ಸೈಬರ್​ ಕ್ರೈಮ್​ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಪಿಎಸ್​ಐ ಪರಶುರಾಮ್ ಒತ್ತಡಕ್ಕೆ ಒಳಗಾಗಿದ್ದರು. ಪಿಎಸ್​ಐ ಪರಶುರಾಮ ಸಾಲದ ಸುಳಿಗೆ ಸಿಲುಕಿದ್ದರು. ಪಿಎಸ್​ಐ ಪರಶುರಾಮ್ ಶುಕ್ರವಾರ ಸಚಿವ ಪ್ರಿಯಾಂಕ್ ಖರ್ಗೆ ಜೊತೆಗೆ ಪೋನ್​ನಲ್ಲಿ ಮಾತನಾಡಿದ್ದರು ಎಂದು ಕುಟುಂಬಸ್ಥರು ಹೇಳಿದ್ದಾರೆ.

ಇದನ್ನೂ ಓದಿಗೆಲುವಿನ ಹೊಸ್ತಿಲಲ್ಲಿ ಎಡವಿದ ಭಾರತ- ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯ ರೋಚಕ ಟೈ!

ಪಿಎಸ್​ಐ ಪರಶುರಾಮ ಸಾವಿಗೆ ಕಾಂಗ್ರೆಸ್​ ಶಾಸಕ ಚನ್ನಾರೆಡ್ಡಿ ಪಾಟೀಲ್​ ತುನ್ನೂರು ಹಾಗೂ ಪುತ್ರ ಪಂಪಣ್ಣಗೌಡ ಕಾರಣವೆಂದು ಪಿಎಸ್​ಐ ಪರಶುರಾಮ ಪತ್ನಿ ಶ್ವೇತಾ ದೂರು ದಾಖಲಿಸಿದ್ದಾರೆ. ಕಾಂಗ್ರೆಸ್​ ಶಾಸಕ ಚನ್ನಾರೆಡ್ಡಿ ಪಾಟೀಲ್ ಪದೇ ಪದೇ ಹಣಕ್ಕೆ ಕಿರುಕುಳ ನೀಡುತ್ತಿದ್ದರು. ನಾವು ದಲಿತರು, ದುಡ್ಡು ಕೊಡಲಿಲ್ಲ ಎಂಬ ಕಾರಣಕ್ಕೆ ಶಾಸಕರು ಪೋಸ್ಟಿಂಗ್ ಕೊಟ್ಟಿಲ್ಲ. ಶಾಸಕರು ತಪ್ಪು ಮಾಡಿದ್ದಾರೆ ಅವರು ಸ್ಥಳಕ್ಕೆ ಬರಬೇಕು ಎಂದು ಪಿಎಸ್​ಐ ಪರಶುರಾಮ ಪತ್ನಿ ಶ್ವೇತಾ ಒತ್ತಾಯಿಸಿದ್ದಾರೆ. ಶ್ವೇತಾ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಸಂಗೀತಾ ಅವರ ಬಳಿ ದೂರು ನೀಡಿದ್ದಾರೆ.

 

Donate Janashakthi Media

Leave a Reply

Your email address will not be published. Required fields are marked *