ಬೆಂಗಳೂರು :ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸತತ 3 ಗಂಟೆ ಸಿಐಡಿ ವಿಚಾರಣೆಗೆ ಹಾಜರಾಗಿದ್ದಾರೆ.
ಬೆಂಗಳೂರಿನ ಸಿಐಡಿ ಕಚೇರಿಗೆ ಹಾಜರಾದ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸತತ 3 ಗಂಟೆ ಸಿಐಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದರು.
ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು. ಈ ವಿಚಾರವಾಗಿ ಯಡಿಯೂರಪ್ಪಗೆ ಪೊಲೀಸರು ನೋಟಿಸ್ ನೀಡಿ ತನಿಖೆಗೆ ಹಾಜರಾಗುವಂತೆ ಸೂಚಿಸಿದ್ದರು. ಆದರೆ ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿರಲಿಲ್ಲ. ನಂತರ ತಮ್ಮ ವಿರುದ್ಧದ ಕೇಸ್ ರದ್ದು ಮಾಡುವಂತೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಹಾಗೂ ಬಂಧನ ಭೀತಿಯಿಂದ ನಿರೀಕ್ಷಣಾ ಜಾಮೀನಿಗೆ ಕೂಡ ಅವರು ಅರ್ಜಿ ಸಲ್ಲಿಸಿದ್ದರು.