ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಸಂಸದ ಪ್ರತಾಪ್ ಸಿಂಹ ಅವರಿಗಿಂತಲೂ ಉತ್ತಮ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ ಎಂದು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾಮೋಹನ್ ದಾಸ್ ಹೇಳಿದರು. ಪ್ರತಾಪ್ ಸಿಂಹ
ಯದುವೀರ್ ಅವರ ಕಛೇರಿ ಉದ್ಘಾಟನೆಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ”ಮೈಸೂರಿನ ಆಳರಸರು ಈ ಭಾಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ದೂರದೃಷ್ಟಿಯ ಫಲವಾಗಿ ಈ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಆಗಿವೆ. ಮೈಸೂರಿನ ಮಹಾರಾಜರು ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ. ಇದೆಲ್ಲವನ್ನೂ ಪರಿಗಣಿಸಿ ರಾಜಮನೆತನದ ಯದುವೀರ್‌ಗೆ ಬಿಜೆಪಿ ಟಿಕೆಟ್ ನೀಡಿದ್ದೇವೆ,” ಎಂದರು.
ಕಾಂಗ್ರೆಸ್‌ನವರು ಮಹಾರಾಜ ಹಾಗೂ ಸಾಮಾನ್ಯ ಅಭ್ಯರ್ಥಿ ನಡುವಿನ ಚುನಾವಣೆ ಎನ್ನುತ್ತಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ”ನಮ್ಮ ಅಭ್ಯರ್ಥಿ ಕೂಡ ಜನಸಾಮಾನ್ಯರ ಜತೆಯೇ ಇದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಮಹಾರಾಜರು. ಆ ಮಹಾರಾಜರ ವಿರುದ್ಧ ನಮ್ಮ ಸಾಮಾನ್ಯ ಅಭ್ಯರ್ಥಿ ಹೋರಾಡುತ್ತಿದ್ದಾರೆ,” ಎಂದು ಹೇಳಿದರು. ಪ್ರತಾಪ್ ಸಿಂಹ
ಇದನ್ನೂ ಓದಿ : JNU ವಿದ್ಯಾರ್ಥಿ ಸಂಘದ ಚುನಾವಣೆ : ಎಡ ವಿದ್ಯಾರ್ಥಿ ಒಕ್ಕೂಟಕ್ಕೆ ಭರ್ಜರಿ ಗೆಲುವು, ಮಖಾಡೆ ಮಲಗಿದ ABVP
ಮಾಜಿ ಸಚಿವ ಸಾ.ರಾ.ಮಹೇಶ್ ಮಾತನಾಡಿ, ‘‘ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಜೆಡಿಎಸ್ ಪಕ್ಷದಿಂದ ಯಾರೇ ಸ್ಪರ್ಸಿದರೂ ಕೆಲಸ ಮಾಡುತ್ತೇವೆ. ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಮತ್ಯಾರು ನಿಲ್ಲಬೇಕು ಎಂಬುವುದರ ಬಗ್ಗೆ ಇನ್ನೂಸ್ಪಷ್ಟವಾಗಿ ನಿರ್ಧರವಾಗಿಲ್ಲ,’’ ಎಂದು ತಿಳಿಸಿದರು. ಈ ವೇಳೆ ಶಾಸಕ ಟಿ.ಎಸ್.ಶ್ರೀವತ್ಸ, ಮಾಜಿ ಶಾಸಕ ಎಸ್.ಎ.ರಾಮದಾಸ್, ಮುಡಾ ಮಾಜಿ ಅಧ್ಯಕ್ಷ ಯಶಸ್ವಿ ಸೋಮಶೇಖರ್, ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ, ಮುಖಂಡರಾದ ಗೋಪಾಲ್ ರಾವ್ ಮತ್ತಿತರರು ಇದ್ದರು.
ಹಿಂದುತ್ವದ ಪಕ್ಷದಲ್ಲಿ ಕಟ್ಟರ್ ಹಿಂದುತ್ವವಾದಿಗಳಿಗೆ ಮಣೆ ಹಾಕದಿರುವುದು ಹಲವು ಚರ್ಚೆಗಳನ್ನು ಹುಟ್ಟುಹಾಕಿದೆ. ಉಗ್ರ ಹಿಂದುತ್ವದ ಮೂಲಕ ಗೆಲ್ಲುವುದು ಸಾಧ್ಯವಿಲ್ಲ ಎಂಬುದು ಬಿಜೆಪಿಗೆ ಅರ್ಥವಾದಂತಿದೆ. ಹಾಗಾಗಿ ರಾಜಮನೆತನದವರಿಗೆ ಟಿಕೆಟ್ ನೀಡಿ ತನ್ನ ಲೋಪ ದೋಷಗಳನ್ನು ಮುಚ್ಚಿಕೊಳ್ಳುತ್ತಿದೆ ಮತ್ತು ತಂತ್ರವನ್ನು ಹೆಣೆಯುತ್ತಿದೆ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ. ಪ್ರತಾಪ್ ಸಿಂಹ
ವಿಡಿಯೋ ನೋಡಿ : ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್ ಕದ ತಟ್ಟಿದ ಸರ್ಕಾರಗಳು