ನವದೆಹಲಿ: ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಅಬ್ಬರಿಸಿದ್ದಾರೆ. ಈ ಪಂದ್ಯದಲ್ಲಿ ಯಶಸ್ವಿ ತಂಡ ತಮ್ಮ ಮೇಲೆ ಇಟ್ಟ ನಂಬಿಕೆಗೆ ಪೂರಕವಾಗಿ ಬ್ಯಾಟ್ ಮಾಡಿದ ಯುವ ಎಡಗೈ ಆಟಗಾರ ಆರ್ಭಟಿಸಿದ್ದಾರೆ. ಈ ಮೂಲಕ ಮೊದಲ ಟೆಸ್ಟ್‌ನಲ್ಲಿ ಅನುಭವಿಸಿದ್ದ ನಿರಾಸೆಯನ್ನು, ನವದೆಹಲಿ ಟೆಸ್ಟ್ ಪಂದ್ಯದಲ್ಲಿ ಮೆಟ್ಟಿ ನಿಂತಿದ್ದಾರೆ.
ಅರುಣ್ ಜೇಟ್ಲಿ ಮೈದಾನದಲ್ಲಿ ಯಶಸ್ವಿ ಜೈಸ್ವಾಲ್ ತಮ್ಮ ನೈಜ್ಯ ಆಟವನ್ನು ಆಡಿ ಮೂರಂಕಿ ಮೊತ್ತವನ್ನು ಮುಟ್ಟಿ ಸಂಭ್ರಮಿಸಿದ್ದಾರೆ. ಅಲ್ಲದೆ ಟೆಸ್ಟ್ ಕ್ರಿಕೆಟ್‌ನಲ್ಲಿ 7ನೇ ಬಾರಿಗೆ ಶತಕ ಬಾರಿಸಿ ಅಬ್ಬರಿಸಿದ್ದಾರೆ.
ಟೀಮ್ ಇಂಡಿಯಾದ ಆರಂಭಿಕ ಸ್ಥಾನವನ್ನು ತನ್ನ ಹೆಸರಿಗೆ ಮಾಡಿಕೊಂಡಿರುವ ಯಶಸ್ವಿ ಜೈಸ್ವಾಲ್, ಪ್ರತಿ ಪಂದ್ಯದಲ್ಲೂ ಅಬ್ಬರಿಸುವ ಸೂಚನೆಯನ್ನು ನೀಡಿದ್ದಾರೆ. ಯಶಸ್ವಿ ಜೈಸ್ವಾಲ್ ಟೆಸ್ಟ್ ಕ್ರಿಕೆಟ್‌ನಲ್ಲಿ 7ನೇ ಶತಕವನ್ನು ಚಿಕ್ಕ ವಯಸ್ಸಿಗೆ ಪೂರ್ಣಗೊಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಯಶಸ್ವಿ ಜೈಸ್ವಾಲ್ ಅರುಣ್ ಜೇಟ್ಲಿ ಮೈದಾನದಲ್ಲಿ ತಾವಾಡಿದ ಮೊದಲ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದರು. ಅಲ್ಲದೆ ತಮ್ಮ ನೈಜ್ಯ ಆಟವನ್ನು ಆಡಿ ಮೂರಂಕಿ ಮುಟ್ಟಿ ಸಂಭ್ರಮಿಸಿದರು. ಇದು ಭಾರತದಲ್ಲಿ ಯಶಸ್ವಿ ಜೈಸ್ವಾಲ್ ಬಾರಿಸಿದ ಮೂರನೇ ಟೆಸ್ಟ್ ಶತಕವಾಗಿದೆ.
ಇದನ್ನೂ ಓದಿ: ಮಹಿಳಾ ಉದ್ಯೋಗಿಗಳಿಗೆ ತಿಂಗಳಿಗೆ ಒಂದು ದಿನ ಮುಟ್ಟಿನ ರಜೆಗೆ ಒಪ್ಪಿಗೆ: ಸಚಿವ ಸಂಪುಟ
ಯಶಸ್ವಿ ಜೈಸ್ವಾಲ್ ಎರಡನೇ ಟೆಸ್ಟ್ ಪಂದ್ಯದಲ್ಲಿ 145 ಎಸೆತಗಳಲ್ಲಿ ಶತಕವನ್ನು ಬಾರಿಸಿದ್ದಾರೆ. ಈ ವೇಳೆ 16 ಬೌಂಡರಿಗಳನ್ನು ಬಾರಿಸಿ ಅಭಿಮಾನಿಗಳನ್ನು ರಂಜಿಸಿದ್ದಾರೆ. ಈ ಶತಕದ ಮೂಲಕ ಯಶಸ್ವಿ ಜೈಸ್ವಾಲ್ ದಾಖಲೆ ಬರೆದಿದ್ದಾರೆ. 24 ವರ್ಷ ವಯಸ್ಸಿನಲ್ಲಿ ಏಳು ಶತಕ ಬಾರಿಸಿದ ಹಿರಿಮೆ ತಮ್ಮದಾಗಿಸಿಕೊಂಡಿದ್ದಾರೆ. 24 ವರ್ಷದ ವಯಸ್ಸಿದ್ದಾಗ ಡಾನ್ ಬ್ರಾಡ್ಮನ್ 12, ಸಚಿನ್ ತೆಂಡೂಲ್ಕರ್ 11, ಗಾರ್ಫೀಲ್ಡ್ ಸೋಬರ್ಸ್ 9 ಶತಕ ಸಿಡಿಸಿದ್ದರು. ಈ ಬಳಿಕ ಯಶಸ್ವಿ ಜೈಸ್ವಾಲ್ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ಯಶಸ್ವಿ 3 ಸಾವಿರ ರನ್ ಸಾಧನೆ
ಈ ಪಂದ್ಯಕ್ಕೂ ಮುನ್ನ ಯಶಸ್ವಿ ಜೈಸ್ವಾಲ್ 25 ಟೆಸ್ಟ್ ಪಂದ್ಯಗಳಲ್ಲಿ 2,245 ರನ್ ಗಳಿಸಿದ್ದಾರೆ. ಜೈಸ್ವಾಲ್ ಅವರ ಟೆಸ್ಟ್ ಸರಾಸರಿ ಸುಮಾರು 49.88 ಆಗಿದ್ದು, ಇದನ್ನು ಸಾಕಷ್ಟು ಉತ್ತಮವಾಗಿದೆ. ಜೈಸ್ವಾಲ್ 23 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಭಾರತದ ಪರ ಆಡಿದ್ದಾರೆ. ಈ ವೇಳೆ ಇವರು 723 ರನ್ ಕಲೆ ಹಾಕಿದ್ದಾರೆ. ಇನ್ನು ಕೇವಲ ಒಂದು ಏಕದಿನ ಪಂದ್ಯವನ್ನು ಆಡಿರುವ ಜೈಸ್ವಾಲ್ 15 ರನ್ ಬಾರಿಸಿದ್ದಾರೆ. ಈ ಮೂಲಕ ಇವರು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 2983 ರನ್ ಕಲೆ ಹಾಕಿದ್ದರು.
ಯಶಸ್ವಿ ಜೈಸ್ವಾಲ್ ದೆಹಲಿಯಲ್ಲಿ ಎರಡನೇ ಟೆಸ್ಟ್ ಪಂದ್ಯದಲ್ಲಿ 17 ರನ್ ಬಾರಿಸುತ್ತಿದ್ದಂತೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 3 ಸಾವಿರ ರನ್ ಕಲೆ ಹಾಕಿದ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಟೀಮ್ ಇಂಡಿಯಾ ಎರಡನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿ, 51 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 198 ರನ್ ಕಲೆ ಹಾಕಿದೆ.
ಇದನ್ನೂ ನೋಡಿ: ನಾಟಕ | “ಪ್ಲಾಸ್ಟಿಕ್ ಅಸುರ” Janashakthi Media
