ಶಿಗ್ಗಾವಿ ವಿಧಾನಸಭಾ ಕ್ಷೇತ್ರ| ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಅಹ್ಮದ್ ಖಾನ್ ಪಠಾಣ್‌ಗೆ ಟಿಕೆಟ್

Please follow and like us:
ಹಾವೇರಿ: ಹಾವೇರಿ ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದ್ದು, ಈ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಅಹ್ಮದ್ ಖಾನ್ ಪಠಾಣ್‌ಗೆ ಟಿಕೆಟ್ ನೀಡಲಾಗಿದೆ.

ಟಿಕೆಟ್ ನಿರೀಕ್ಷೆಯಲ್ಲಿದ್ದಂತ ಅಜ್ಜಂಪೀರ್ ಖಾದ್ರಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿರಲಿಲ್ಲ.ಹೀಗಾಗಿ ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದಂತ ವೇಳೆಯಲ್ಲಿ ಖಾದ್ರಿ ಅವರು ಓಡೋಡಿ ಬಂದು ನಾಮಪತ್ರವನ್ನು ಸಲ್ಲಿಸಿದ್ದಾರೆ.

ಇದನ್ನು ಓದಿ : ಬಿಕ್ಕಟ್ಟು ಶಮನ | ಮಹಾವಿಕಾಸ್ ಅಘಾಡಿ ಮೈತ್ರಿಕೂಟದಲ್ಲಿ ಯಾರಿಗೆ ಎಷ್ಟು ಸೀಟು?

ಶಿಗ್ಗಾವಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಂಡಾಯದ ಬಿಸಿ ತಟ್ಟಿದೆ. ಸಚಿವ ಜಮೀರ್ ಅಹ್ಮದ್ ಖಾನ್ ಅವರು ಅಜ್ಜಂಪೀರ್ ಖಾದ್ರಿ ಅವರ ಮನವೊಲಿಕೆಗೆ ಮಾಡಿದ ಪ್ರಯತ್ನ ಸಫಲವಾಗಿಲ್ಲ.

ಇಂದು ನಾಮಪತ್ರ ಸಲ್ಲಿಸಲು ಕೊನೆಯ 13 ನಿಮಿಷದ ವೇಳೆಯಲ್ಲಿ ಓಡೋಡಿ ಬಂದು ಅಜ್ಜಂಪೀರ್ ಖಾದ್ರಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ.

ಇದನ್ನು  ನೋಡಿ : ಭ್ರಷ್ಟ ರಾಜಕೀಯ ಹಾಗೂ ಅಧಿಕಾರಶಾಹಿಗೆ ಅಮಾಯಕ ಕಟ್ಟಡ ಕಾರ್ಮಿಕರು ಬಲಿ Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *