ವಿಧಾನ ಪರಿಷತ್ತಿಗೆ ಡಾ. ಯತೀಂದ್ರ ಅವಿರೋಧ ಅಭ್ಯರ್ಥಿ

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್‌ ಗೆ ನಡೆಯಲಿರುವ ಚುನಾವಣೆಗೆ ಸಿಎಂ ಸಿದ್ದರಾಮಯ್ಯ ಡಾ.ಯತೀಂದ್ರ ಅವಿರೋಧ ಆಯ್ಕೆಯ ಅಭ್ಯರ್ಥಿಯಾಗಲಿದ್ದಾರೆ.ಜೂನ್ 13 ರಂದು ನಡೆಯಲಿರುವ ಪರಿಷತ್ ಚುನಾವಣೆಗೆ

ಹನ್ನೊಂದು ಮಂದಿ ಅಭ್ಯರ್ಥಿ ಆಯ್ಕೆ ಸಂಬಂಧದ ಚುನಾವಣೆಗೆ ಪರಿಷತ್‌ಗೆ ಚುನಾವಣೆ ನಡೆಯುತ್ತಿದೆ. ಕಾಂಗ್ರೆಸ್ ಏಳು ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವಿರೋಧ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ.

ಇದನ್ನು ಓದಿ : ವಿಕೃತ ಲೈಂಗಿಕ ಹಗರಣ ಆರೋಪಿ ಪ್ರಜ್ವಲ್ ರೇವಣ್ಣ ಬಂಧನ

ಹೈಕಮಾಮಡ್‌ ಜತೆಗೆ ಸಾಕಷ್ಟು ಚರ್ಚೆ ಬಳಿಕ 65 ಮಂದಿಯ ಪಟ್ಟಿಯನ್ನು ಶಾರ್ಟ್‌ಲಿಸ್ಟ್ ಮಾಡಲಾಗಿತ್ತು. ಈ ಪಟ್ಟಿಯನ್ನೇ ದಿಲ್ಲಿ ನಾಯಕರಿಗೆ ಸಲ್ಲಿಸಲಾಗಿದೆ. ಡಾ. ಯತೀಂದ್ರ ವಿಚಾರದಲ್ಲಿ ಈಗಾಗಲೇ ಮಾತು ಕೊಟ್ಟಿರುವ ಹೈಕಮಾಂಡ್ ನಿರ್ಧಾರ ಕೈಗೊಳ್ಳುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ : ಅಕಾಂಕ್ಷಿಗಳಲ್ಲಿ ಹೈದ್ರಾಬಾದ್ ಕರ್ನಾಟಕ, ಮುಂಬಯಿ ಕರ್ನಾಟಕ, ಬಯಲು ಸೀಮೆ ಎಲ್ಲಾ ಭಾಗದವರಿದ್ದಾರೆ. 21 ಮಂದಿ ಕರಾವಳಿ ಭಾಗದಲ್ಲಿ, 11 ಮಂದಿ ಮೈಸೂರು ಭಾಗದಲ್ಲಿ ಆಕಾಂಕ್ಷಿಗಳು ಇದ್ದಾರೆ ಎಂದು ಡಿಸಿಎಂ ತಿಳಿಸಿದ್ದಾರೆ. ಪರಿಷತ್‌ ಚುನಾವಣೆಯಲ್ಲಿ 11 ಕ್ಷೇತ್ರಗಳ ಪೈಕಿ ವಿಧಾನಸಭೆಯಲ್ಲಿನ ಸಂಖ್ಯಾಬಲ ಆಧಾರದಲ್ಲಿ ಪಕ್ಷಕ್ಕೆ ಗೆಲ್ಲುವ ಅವಕಾಶವಿರುವ 7 ಅಭ್ಯರ್ಥಿಗಳನ್ನು ಫೈನಲ್‌ ಮಾಡಲು ಕಸರತ್ತು ನಡೆದಿದೆ.

ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ವರಿಷ್ಠರ ಅಭಿಪ್ರಾಯಗಳನ್ನು ಪರಿಗಣಿಸಬೇಕು ಎಂಬ ಗೃಹ ಸಚಿವ ಪರಮೇಶ್ವರ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾವು ಅವರ ಅಭಿಪ್ರಾಯವನ್ನು ತೆಗೆದುಕೊಂಡಿದ್ದೇವೆ. ಪರಮೇಶ್ವರ ಅವರು ಸಿಎಂ ಅವರನ್ನು ಭೇಟಿ ಮಾಡಿದ್ದಾರೆ ಎಂದು ಹೇಳಿದ್ದಾರೆ.

 

ಇದನ್ನು ನೋಡಿ : ಸರಣಿ ಲೈಂಗಿಕ ದೌರ್ಜನ್ಯ ನಡೆಸಿರುವ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಒತ್ತಾಯಿಸಿ ಸಹಸ್ರಾರು ಜನರಿಂದ ಬೃಹತ್ ಹೋರಾಟ

Donate Janashakthi Media

Leave a Reply

Your email address will not be published. Required fields are marked *