ಬೆಂಗಳೂರು: ರಾಜ್ಯದ ಕೆಲವೆಡೆ ಸೋಮವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಬೆಂಗಳೂರು ನಗರ ಸೇರಿದಂತೆ 14 ಜಿಲ್ಲೆಗಳಿಗೆ ಯೊಲ್ಲೊ ಅಲರ್ಟ್ ಘೋಷಿಸಿದೆ.
ಇದನ್ನೂ ಓದಿ:ಭಾರಿ ಮಳೆಯ ಮುನ್ಸೂಚನೆ ಒಂದು ವಾರ ಹೈ ಅಲರ್ಟ್: ಕಂದಾಯ ಸಚಿವ ಕೃಷ್ಣ ಬೈರೇಗೌಡ
ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು,ಹಾಸನ,ತುಮಕೂರು,ಕೊಡಗು,ಮೈಸೂರು,ಚಾಮರಾಜನಗರ,ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ಕೋಲಾರ ಜಿಲ್ಲೆಗೆ ಯೊಲ್ಲೊ ಅಲರ್ಟ್ ನೀಡಲಾಗಿದೆ.
ಮುಂದಿನ ಮೂರು ದಿನ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ ಎಂದು ಇಲಾಖೆ ಮಾಹಿತಿ ತಿಳಿಸಿದೆ.
ಭಾನುವಾರ ಬೆಳಿಗ್ಗೆ 8.30ಕ್ಕೆ ಅನ್ವಯಿಸಿದಂತೆ ಹಿಂದಿನ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಕೆಲೆವಡೆ ಮಳೆಯಾಗಿದೆ. ರಾಯಚೂರಿನ ಸಿಂಧಗಿಯಲ್ಲಿ ಗರಿಷ್ಠ (5 ಸೆಂ.ಮೀ) ಮಳೆಯಾಗಿದೆ ಎಂದು ಇಲಾಖೆ ಹೇಳಿದೆ.