ಶಿವಮೊಗ್ಗ: ನಗರದ ಮೇಲಿನ ತುಂಗಾನಗರದಲ್ಲಿ ಯುವಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜುಲೈ 26) ತಡರಾತ್ರಿ ನಡೆದಿದೆ. ಮಣಿಕಂಠ (38) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ.
ಈತ ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದು, ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು ಎನ್ನಲಾಗಿದೆ. ಶನಿವಾರ ತಡರಾತ್ರಿ ಮಣಿಕಂಠನ ತಲೆ ಮೇಲೆ ದೊಡ್ಡ ಗಾತ್ರದ ಕಲ್ಲನ್ನು ಎತ್ತಿ ಹಾಕಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ: ಮೃತದೇಹಗಳ ಹೂತಿಟ್ಟ ಜಾಗವನ್ನು ತೋರಿಸಿದ ಸಾಕ್ಷಿ ದೂರುದಾರ
ಘಟನಾ ಸ್ಥಳಕ್ಕೆ ಡಿವೈಎಸ್ಪಿ ಬಾಬು ಅಂಜನಪ್ಪ ಹಾಗೂ ತುಂಗಾನಗರ ಠಾಣೆ ಇನ್ಸ್ ಪೆಕ್ಟರ್ ಕೆ.ಗುರುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ನೋಡಿ: ಬಿಹಾರ ಚುನಾವಣೆ: ಹಿಂದುಳಿದ, ಅತಿ ಹಿಂದುಳಿದ ವರ್ಗಗಳ(ಇಬಿಸಿ) ಒಲವು, ನಿಲುವು ಎತ್ತ ಕಡೆ? Janashakthi Media
