2024 ಜನವರಿಗೆ ಯುವನಿಧಿ ಯೋಜನೆ: ಸಿಎಂ ಸಿದ್ದರಾಮಯ್ಯ

Please follow and like us:
ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಐದನೇ ಗ್ಯಾರಂಟಿಯಾದ ಯುವ ನಿಧಿ ಯೋಜನೆ2024 ಜನರವರಿಯಲ್ಲಿ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಯುವನಿಧಿ

ಈ ಕುರಿತು ಭಾನುವಾರ ತೆಲಂಗಾಣದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರದಲ್ಲಿ  ಪಾಲ್ಗೊಂಡಿದ್ದ ಅವರು, ಈ ವಿಷಯ ತಿಳಿಸಿದರು.

ಪದವಿ, ಡಿಪ್ಲೊಮಾ ಪಡೆದು ನಿರುದ್ಯೋಗಿಗಳಾಗಿರುವರಿಗೆ ಯುವ ನಿಧಿ ಸಿಗಲಿದೆ. 2022-23ನೇ ಸಾಲಿನಲ್ಲಿ ಪದವಿ ಪಡೆದ ಯುವಜನರಿಗೆ ಎರಡು ವರ್ಷಗಳವರೆಗೆ ತಿಂಗಳಿಗೆ 3000 ಹಾಗೂ ಡಿಪ್ಲೊಮಾ ಮಾಡಿದ ಯುವಜನರಿಗೆ ಎರಡು ವರ್ಷಗಳವರೆಗೆ ತಿಂಗಳಿಗೆ ನೀಡಲಾಗುವುದು, ಇದಲ್ಲದೇ ಯುವಜನರಿಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನೂ ನೀಡಲಾಗುತ್ತದೆ ಎಂದರು.

ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರ ಪತನವಾಗಲಿದೆಯೆ? ದುಬೈಯಲ್ಲಿ ತಂತ್ರ ನಡೆಯುತ್ತಿದೆಯೆ?

ಕಾಂಗ್ರೆಸ್‌ ತನ್ನ ಎಲ್ಲ ಭರವಸೆಗಳನ್ನೂ ಈಡೇರಿಸಿದೆ. ಕರ್ನಾಟಕದಲ್ಲಿದ್ದ ಬಿಜೆಪಿ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ಹೇಳಿದ್ದ ಶೇ ರಷ್ಟು ಭರವಸೆಗಳನ್ನಷ್ಟೇ ಈಡೇರಿಸಿತ್ತು. ಕರ್ನಾಟಕದಲ್ಲಿ ನಡೆದ ಚುನಾವಣೆ ವೇಳೆ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಗ್ಯಾರಂಟಿ ಯೋಜನೆ ಜಾರಿಯೇ ಆಗುವುದಿಲ್ಲ. ಈ ರೀತಿಯ ಘೋಷಣೆಯಿಂದ ರಾಜ್ಯದ ಆರ್ಥಿಕತೆ ಕುಂಠಿತವಾಗುತ್ತದೆ ಎಂದಿದ್ದರು, ಗ್ಯಾರಂಟಿಗಳನ್ನು ನಾವು ಜಾರಿ ಮಾಡಿದ ಬಳಿಕವೂ ರಾಜ್ಯದ ಆರ್ಥಿಕತೆ ಸದೃಢವಾಗಿದೆ ಎಂದರು.

ವಿಡಿಯೋ ನೋಡಿ: ಮಹಾಧರಣಿ| ದುಡಿಯುವ ಜನರ ಜೊತೆ ಆಳುವವರ ಚೆಲ್ಲಾಟ Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *