ಬೆಂಗಳೂರು: ಭಾರೀ ಚರ್ಚೆ, ವಿವಾದಕ್ಕೆ ಕಾರಣವಾಗಿರುವ ಬೆಂಗಳೂರಿನ ಹಳೆಗುಡ್ಡದಹಳ್ಳಿನ ಯುವಕ ಚಂದ್ರು ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಲ್ಲಿ ಯಾರ ಹೇಳಿಕೆಯೂ ಮುಖ್ಯವಲ್ಲ, ಸತ್ಯ ಹೊರಬರಬೇಕು ಅಷ್ಟೇ. ಯಾರು ವಾಗ್ದಾಳಿ ಮಾಡ್ತಾರೋ, ಯಾರು ಹೇಳಿಕೆ ಕೊಡ್ತಾರೋ ಅದು ಮುಖ್ಯವಾಗುವುದಿಲ್ಲ. ಘಟನೆಯ ಸತ್ಯಾಂಶ ಜನರಿಗೆ ಗೊತ್ತಾಗಬೇಕಿದೆ ಎಂದಿದ್ದಾರೆ.
ಇದನ್ನು ಓದಿ: ಬೇಜವಾಬ್ದಾರಿ ಮಾತುಗಳನ್ನಾಡಿ-ಇದೀಗ ಮತ್ತೆ ತಮ್ಮ ಹೇಳಿಕೆ ಹಿಂಪಡೆದ ಗೃಹ ಸಚಿವ ಅರಗ ಜ್ಞಾನೇಂದ್ರ
ಈ ಹಿನ್ನೆಲೆಯಲ್ಲಿ ನಾನು ಕಮಿಷನರ್ ಮತ್ತು ಡಿಜಿಯವ ಬಳಿ ಮಾತನಾಡಿದ್ದೇನೆ. ಪ್ರಕರಣವನ್ನು ಸಿಐಡಿಗೆ ಕೊಡಬೇಕು ಎಂದು ತೀರ್ಮಾನ ಮಾಡಿದ್ದೇನೆ. ನಿಷ್ಪಕ್ಷಪಾತವಾಗಿ ತನಿಖೆಯಾಗಲಿ ಎಂದರು. ಇಂದು ಬಹುತೇಕ ಕಮಿಷನರ್ ಅವರು ಡಿಜಿಗೆ ಪತ್ರ ಬರೆದು ಸಿಐಡಿಗೆ ಪ್ರಕರಣವನ್ನು ವಹಿಸಿಕೊಡಲಿದ್ದಾರೆ ಎಂದು ಹೇಳಿದರು.
ಏಪ್ರಿಲ್ 05ರಂದು ಹಳೆಗುಡ್ಡದಹಳ್ಳಿಯಲ್ಲಿ ಚಂದ್ರು ಎಂಬ ಯುವಕನ ಹತ್ಯೆಯಾಗಿತ್ತು. ಆತನು ಉರ್ದು ಮಾತನಾಡಲಿಲ್ಲ ಎಂಬ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದರು.