ಬೆಂಗಳೂರು: ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗವು ಜುಲೈ 1ರಂದು ಪ್ರಕಟಪಡಿಸಿದೆ. ಈಗಾಗಲೇ ತೆರವಾಗಿರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಕ್ಷೇತ್ರಗಳಲ್ಲಿ ಚುನಾವಣಾ ಕಣಕ್ಕೆ ಇಳಿಯಲಿರುವ ಅಭ್ಯರ್ಥಿಗಳ ರಾಜಕೀಯ ಚಟುವಟಿಕೆಗಳು ಸಹ ಬಿರುಸುಗೊಂಡಿದೆ.
ಚುನಾವಣಾ ಆಯೋಗವು ಮೀಸಲಾತಿ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳು ಏನಾದರು ಸಲ್ಲಿಸಬೇಕಾದ್ದಲ್ಲಿ ಜುಲೈ 8ರ ಒಳಗಾಗಿ ಸಲ್ಲಿಸಲು ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಕೆಲವು ಜಿಲ್ಲೆಗಳಲ್ಲಿ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸಲ್ಲಿಸಲು ಕೆಲವೆಡೆ ಕೆಲ ಮುಖಂಡರು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.
ಇದನ್ನು ಓದಿ: ಕೋವಿಡ್ ಎಫೆಕ್ಟ್: ಚುನಾವಣೆಗಳನ್ನು 6 ತಿಂಗಳ ಕಾಲ ಮುಂದೂಡಿದ ರಾಜ್ಯ ಸರ್ಕಾರ
ಮತ್ತೊಂದು ಕಡೆಯಲ್ಲಿ ಮೀಸಲಾತಿಯಿಂದ ಸ್ಪರ್ಧೆಯಿಂದ ವಂಚಿತರಾದ ಸದಸ್ಯರುಗಳು ಸಹ ಮತ್ತೊಂದು ಕ್ಷೇತ್ರಗಳ ಹುಡುಕಾಟದಲ್ಲಿ ತೊಡಗಿವೆ. ಮೀಸಲಾತಿ ಬದಲಾವಣೆಯಿಂದಾಗಿ ಬಹಳಷ್ಟು ಸದಸ್ಯರು ಬೇರೆ ಕ್ಷೇತ್ರದಿಂದ ಮತ್ತೆ ಸ್ಪರ್ಧೆ ಅಥವಾ ಚುನಾವಣೆಯಿಂದ ಹಿಂದೆ ಸರಿಯುವ ಸಾಧ್ಯತೆಗಳು ಇವೆ.
ಮೀಸಲಾತಿ ಪಟ್ಟಿಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಕ್ಷೇತ್ರಗಳ ಪ್ರಭಾವಕ್ಕೆ ಸಂಬಂಧಿಸಿದಂತೆ ರಾಜಕಾರಣದ ಕೆಲಸಗಳು ಬಿರುಸಿಪಡೆದುಕೊಂಡಿವೆ. ಈಗಾಗಲೇ, ಚುನಾವಣೆಗಳು ನಡೆದು ಹೊಸಬರು ಕಾರ್ಯಭಾರ ನಡೆಸಬೇಕಾಗಿತ್ತು. ಆದರೆ, ಕೋವಿಡ್ ನಿಂದಾಗಿ ಚುನಾವಣೆಗಳನ್ನು ಮುಂದೂಡಲಾಗಿತ್ತು. ಇದರ ನಡುವೆ ರಾಜ್ಯ ಚುನಾವಣಾ ಆಯೋಗವು ಮೀಸಲಾತಿ ಪಟ್ಟಿಯನ್ನು ಬಿಡುಗಡೆ ಮಾಡಿ, ಆಕ್ಷೇಪಣೆ ಸಲ್ಲಿಸಲು ಕೊನೆ ದಿನಾಂಕವನ್ನು ನಿಗದಿಪಡಿಸಿದೆ.
ರಾಜ್ಯದಲ್ಲಿ ಹೊಸದಾಗಿ 56 ತಾಲ್ಲೂಕುಗಳು ರಚನೆಯಾಗಿರುವುದರಿಂದ ಮತ್ತು ತಾಲ್ಲೂಕು ಪಂಚಾಯತಿ ಕ್ಷೇತ್ರಕ್ಕೆ ನಿಗದಿಪಡಿಸಿಲಾಗಿದ್ದ ಪ್ರತಿ 10,000 ಜನಸಂಖ್ಯೆಗೆ ಬದಲಾಗಿ ಪ್ರತಿ 12,500 ರಿಂದ 15,000 ಜನಸಂಖ್ಯೆಗೆ ಒಂದು ಸ್ಥಾನವನ್ನು ನಿಗದಿಪಡಿಸಿದೆ. ಇದರಿಂದ ಈಗಾಗಲೇ ಇದ್ದ 3,903 ತಾಲ್ಲೂಕು ಪಂಚಾಯತಿ ಕ್ಷೇತ್ರಗಳ ಪೈಕಿ 618 ತಾಲ್ಲೂಕು ಪಂಚಾಯತಿ ಕ್ಷೇತ್ರಗಳ ಸಂಖ್ಯೆಯೂ ಕಡಿಯೆಯಾಗಿದ್ದು, ಪ್ರಸ್ತುತ 3.903 ತಾಲ್ಲೂಕು ಪಂಚಾಯತಿ ಕ್ಷೇತ್ರಗಳು ಅಂತಿಮಗೊಂಡಿವೆ. ಅಲ್ಲದೆ, ಕೆಲವು ಗ್ರಾಮೀಣ ಪ್ರದೇಶಗಳು ನಗರ ಪ್ರದೇವಾಗಿ ಪರಿವರ್ತನೆಗೊಂಡಿರುವುದರಿಂದ ಭೌಗೋಳಿಕವಾಗಿಯೂ ಕ್ಷೇತ್ರದ ವ್ಯಾಪ್ತಿಗಳು ಬದಲಾಗಿವೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಾಲ್ಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿಗಳಲ್ಲಿ ಸ್ಥಾನಗಳನ್ನು ಆವರ್ತನೆಯ ಮೇಲೆ ಮೀಸಲಿಡುವ) ನಿಯಮಗಳು, 2021ರ ನಿಯಮ 6 ರನ್ವಯ ಅಧಿಸೂಚನೆಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ. ಆಕ್ಷೇಪಣೆಗಳಿಗೆ ಚುನಾವಣಾ ಆಯೋಗವು 7 ದಿನಗಳ ಕಾಲಾವಕಾಶವನ್ನು ನಿಗದಿಪಡಿಸಿದೆ ಮತ್ತು ಆಕ್ಷೇಪಣೆಗಳನ್ನು ಕಾರ್ಯದರ್ಶಿಗಳು, ರಾಜ್ಯ ಚುನಾವಣಾ ಆಯೋಗ, ಕನ್ನಿಂಗ್ ಹ್ಯಾಂ ರಸ್ತೆ, ಬೆಂಗಳೂರು. ಇಲ್ಲಿಗೆ ಸಲ್ಲಿಸಲು ಕೋರಿದೆ.
ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಮೀಸಲಾತಿ ಸಂಬಂಧಪಟ್ಟಂತೆ ಸಂಪೂರ್ಣ ವಿವರಗಳನ್ನು ಚುನಾವಣಾ ಆಯೋಗದ ವೆಬ್ ಸೈಟ್‌ನಲ್ಲಿ ಪ್ರಕಟಿಸಿದೆ.